image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದ ಜನಪರ ಕೆಲಸಕ್ಕೆ ಮತದಾರರ ಜೈ- ಪದ್ಮರಾಜ್ ಆರ್. ಪೂಜಾರಿ

ರಾಜ್ಯ ಸರ್ಕಾರದ ಜನಪರ ಕೆಲಸಕ್ಕೆ ಮತದಾರರ ಜೈ- ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ದ.ಕ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗು ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ಜನತೆ ಒಪ್ಪಿಕೊಂಡಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ. ವಿಪಕ್ಷಗಳ ವಕ್ಫ್, ರೇಷನ್ ಕಾರ್ಡ್ ಗೊಂದಲ ಕುರಿತ ಅಪಪ್ರಚಾರಗಳಿಗೆ ಪ್ರಬುದ್ಧ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪುನಶ್ಚೇತನ ಮತ್ತು ಮುಂಬರುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಈ ಫಲಿತಾಂಶ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈಯನ್ನು ಮತ್ತಷ್ಟು ಬಲಪಡಿಸಿದೆ. ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ಪಕ್ಷದ ಮುಖಂಡರು ಹಾಗು ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು  ‌    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Category
ಕರಾವಳಿ ತರಂಗಿಣಿ