image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ಹೋರಾಟಕ್ಕೆ ಸಿದ್ಧ - ಕಿಶೋರ್ ಕುಮಾರ್ ಪುತ್ತೂರು

ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ಹೋರಾಟಕ್ಕೆ ಸಿದ್ಧ - ಕಿಶೋರ್ ಕುಮಾರ್ ಪುತ್ತೂರು

ಮಂಗಳೂರು: ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. 

ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನಾಯಕರ ಮೇಲೆ ಸುಮೊಟೋ ಕೇಸ್ ದಾಖಲಿಸಿರುವ ಕುರಿತು ಮಾತನಾಡಿರುವ ಕಿಶೋರ್ ಕುಮಾರ್, ರಾಜ್ಯದಲ್ಲಿ ಆಡಳಿತ ಸರಕಾರವು ಆಡಳಿತಕ್ಕೆ ಬಂದಾಗಿನಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿರಿಸಿ ಕೇಸು ದಾಖಲಿಸುವುದು, ಗಡಿಪಾರು, ಗೂಂಡಾ ಕಾಯ್ದೆ ಹೇರುವ ಮೂಲಕ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ತುಘಲಕ್ ಮಾದರಿಯ ಆಡಳಿತ ಜಾರಿಗೊಳಿಸಿದ್ದು ಸಂವಿಧಾನ ಜನತೆಗೆ ನೀಡಿರುವ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯನ್ನು ಬಳಸಿ ಸಂಘ ಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮನ್ನು ನೇರವಾಗಿ ಎದುರಿಸಲಾಗದ ಕಾಂಗ್ರೆಸ್ ವಾಮಮಾರ್ಗದ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಹಿಂದೂ ಜಾಗರಣಾ ವೇದಿಕೆಯ ಮುಖಂಡರಾದ ಶ್ರೀಕಾಂತ್ ಶೆಟ್ಟಿ ಅವರ ಮೇಲೆ ಜಾಮೀನು ರಹಿತ ಕೇಸು ದಾಖಲಿಸಲಾಗಿದೆ. ಪದೇ ಪದೇ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕೇಸು ದಾಖಲಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಲಾಗುವುದು. ಕಾರ್ಯಕರ್ತರಿಗಾಗಿ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

Category
ಕರಾವಳಿ ತರಂಗಿಣಿ