ಮಂಗಳೂರು: ಬಾಂಗ್ಲಾ ದೇಶದಲ್ಲಿ ಹಿಂದುಗಳಿಗೆ ಆಗುತ್ತಿರುವ ದೌರ್ಜನ್ಯ ಖಂಡಿಸಿ ಹಿಂದುಗಳ ರಕ್ಷಣೆಗೆ ಮೊದಿಯವರನ್ನು ಅಗ್ರಹಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಇಂದು ಜಿಲ್ಲಾಧಿಕಾರಿ ಗೆ ಮನವಿ ನೀಡಿದರು.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಯಾಗುತ್ತಿರುವುದು ವರದಿಯಾಗುತ್ತಿದೆ. ಇದು ಖಂಡನೀಯ. ಅಲ್ಲಿನ ಸರ್ಕಾರ ಅಲ್ಪಸಂಖ್ಯಾತ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ನಮ್ಮ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸರ್ಕಾರದೊಂದಿಗೆ ಮಾತುಕತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಬೇಕಿದೆ.
ಭಾತರ ಸರ್ಕಾರ ತನ್ನ ವಿದೇಶಾಂಗ ನೀತಿಯಲ್ಲಿ ಶಕ್ತಿ ಸಾಮರ್ಥ್ಯ ಪ್ರದರ್ಶನ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ತಕ್ಷಣ ಕೇಂದ್ರ ಸರ್ಕಾರ ಈ ಕುರಿತು ಮಧ್ಯಪ್ರವೇಶ ಮಾಡುವಂತೆ ತಮ್ಮ ಮೂಲಕ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರಿಗೆ ಈ ಮನವಿ ಸಲ್ಲಿಸುತ್ತಿದ್ದೇವೆ.ಅದೇ ರೀತಿ ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಹಿಂಸಾಚಾರವನ್ನು ತಡೆಯಬೇಕು ಅಥವಾ ಕಾನೂನು ವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಅಲ್ಲಿನ ರಾಜ್ಯ ಸರ್ಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ವಿಕಾಸ್ ಶೆಟ್ಟಿ, ಹಬೀಬ್ ಕಣ್ಣೂರು, ಸುನಿಲ್ ಬಜಿಲಕೇರಿ, ಪ್ರಕಾಶ್ ಸಾಲ್ಯಾನ್, ಮನೀಶ್ ಸಾಲ್ಯಾನ್ ಮತ್ತು ಶಕುಂತಲಾ ಗಟ್ಟಿ ಉಪಸ್ಥಿತರಿದ್ದರು.