ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದ್ದು ,ನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಇನ್ನೂರಕ್ಕೂ ಅಧಿಕ ಮಹಿಳೆಯರು,ಮುಂದೆ ನಮ್ಮ ಮಕ್ಕಳೇ ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಾರೆಂಬ ಉತ್ಸಾಹದಲ್ಲಿ ಕೆಲಸ ನಿರ್ವಹಿಸುತ್ತಿರುವುದು ವಿಶೇಷ.
ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಇದೇ ಬರುವ 11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನ ಸಭೆ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.