image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯ : ಆದಿತ್ಯ ಠಾಕ್ರೆ

ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯ : ಆದಿತ್ಯ ಠಾಕ್ರೆ

ಮಹಾರಾಷ್ಟ್ರ: ಅತೀ ಹೆಚ್ಚು ಮರಾಠಿ ಭಾಷಿಕರನ್ನು ಹೊಂದಿರುವ ಕರ್ನಾಟಕದ ಬೆಳಗಾವಿಯನ್ನು ಮಹಾರಾಷ್ಟ್ರದಲ್ಲಿ ಸೇರಿಸಬೇಕು. ಈ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂದು ಉದ್ಧವ್​ ಠಾಕ್ರೆ ಬಣದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಒತ್ತಾಯಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮರಾಠಿ ಮಾತನಾಡುವ ಜನರಿಗೆ ಅನ್ಯಾಯವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯ ಸಂಭ್ರಮಾಚರಣೆ ನಡೆಯುತ್ತಿದೆ. ಅತ್ತ, ನೆರೆಯ ರಾಜ್ಯದ ಬೆಳಗಾವಿಯಲ್ಲಿ ನಮ್ಮವರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭಗೊಂಡಿದೆ. ಇದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​) ವಿರೋಧ ವ್ಯಕ್ತಪಡಿಸುತ್ತಿದೆ. ಜೊತೆಗೆ, ಅದು ವಾರ್ಷಿಕವಾಗಿ ಆಯೋಜಿಸುವ ಮಹಾಮೇಳಾವ್​ ಸಭೆಗೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದರ ಬೆನ್ನಲ್ಲೇ ಆದಿತ್ಯ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಅವರು ಮರಾಠಿ ಭಾಷಿಕರಿಗೆ ಹೆಚ್ಚಿನ ಅನುದಾನದ ಭರವಸೆ ನೀಡಿದ್ದರು. ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಆ ಭರವಸೆ ಮುಟ್ಟಿದೆಯೇ ಎಂದು ಪ್ರಶ್ನಿಸಿದರು.

Category
ಕರಾವಳಿ ತರಂಗಿಣಿ