image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್‌ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ.

ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.

ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ, ಶಾಸಕರಾದ ಡಿ ವೇದವ್ಯಾಸ ಕಾಮತ್ ಮತ್ತು ಡಾ.ವೈ ಭರತ್‌ ಶೆಟ್ಟಿ, ಮಾಜಿ ಅಧ್ಯಕ್ಷ ಸಂಜೀವ ಮಠಂದೂರು, ಸಾಜಾ ರಾಧಾಕೃಷ್ಣ ಆಳ್ವಾ ಮತ್ತು ವಿಕಾಸ್ ಪುತ್ತೂರು  ಉಪಸ್ಥಿತರಿದ್ದರು

Category
ಕರಾವಳಿ ತರಂಗಿಣಿ