ಮಂಗಳೂರು - ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.೨೬ ಹಾಗೂ ೨೭ ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ ೫೦೦ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿAಗ್ ಮತ್ತು ಇತರೆ ವಿದ್ಯಾರ್ಹತೆಯುಳ್ಳ ರಾಜ್ಯದ ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ನಿರುದ್ಯೋಗಿ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಯಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: ೯೯೧೮೫೯೯೧೮೦೦ (ವಿಸ್ತರಣಾ ಸಂಖ್ಯೆ ೪) ನ್ನು ಸಂಪರ್ಕಿಸುವAತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.