image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಅಪಾರ ಹಾನಿ: ರಾಜ್ಯ ಸರಕಾರದಿಂದ ನೆರವಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಅಪಾರ ಹಾನಿ: ರಾಜ್ಯ ಸರಕಾರದಿಂದ ನೆರವಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

ಮಂಗಳೂರು: ಹಲವಾರು ವರ್ಷಗಳ ನಂತರ ಮುಂಗಾರು ಮಾರುತಗಳು ಸಾಕಷ್ಟು ಮುಂಚಿತವಾಗಿಯೇ ಕರಾವಳಿಯನ್ನು ಪ್ರವೇಶಿಸಿದ್ದು, ನಮ್ಮ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿ ಜನಸಾಮಾನ್ಯರು ಅಪಾರ ನಷ್ಟ ಅನುಭವಿಸುವಂತಾಗಿದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದ್ದಾರೆ.

ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದ್ದರೆ 10 ಸಾವಿರ, ಭಾಗಶಃ ಹಾನಿಯಾಗಿದ್ದರೆ 3 ಲಕ್ಷ, ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ನೀಡುತ್ತಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿಯೇ ಇಲ್ಲವಾಗಿದ್ದು ಪರಿಹಾರ ಮೊತ್ತವನ್ನು ಗಣನೀಯವಾಗಿ ಇಳಿಸಿದ ಪರಿಣಾಮ ಇದೀಗ ಮನೆಗೆ ನೀರು ನುಗ್ಗಿದರೆ ಪರಿಹಾರವೇ ಇಲ್ಲ, ಭಾಗಶಃ ಹಾನಿಯಾದರೆ ಕೇವಲ 50 ಸಾವಿರದಿಂದ 1 ಲಕ್ಷ, ಮತ್ತು ಸಂಪೂರ್ಣ ಹಾನಿಯಾಗಿದರೂ ಕೇವಲ 1.5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಇದರಿಂದ ಅನೇಕ ಬಡ ಕುಟುಂಬಗಳು ತೀವ್ರ ತೊಂದರೆಗೀಡಾಗಿವೆ ಎಂದರು.

ರಾಜ್ಯ ಸರ್ಕಾರ ಕಳೆದ ಮಳೆಗಾಲದ ಪರಿಹಾರ ವಿಷಯದಲ್ಲಿ ನಮ್ಮ ಜಿಲ್ಲೆಯನ್ನು ಸಂಪೂರ್ಣ  ಕಡೆಗಣಿಸಿತ್ತು. ಈ ಬಾರಿ ಈಗಾಗಲೇ ಹಲವು ಮನೆಗಳಿಗೆ ನೀರು ನುಗ್ಗಿ ಬೆಲೆಬಾಳುವ ವಸ್ತುಗಳ ಸಹಿತ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ. ಕೆಲವೆಡೆ ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಹಾಗಾಗಿ ಈ ವರ್ಷವೂ ಅದೇ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರಿಸದೇ ಹಿಂದಿನ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಪರಿಹಾರ ಒದಗಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಶಾಸಕರು ಆಗ್ರಹಿಸಿದರು.

Category
ಕರಾವಳಿ ತರಂಗಿಣಿ