image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸೌಜನ್ಯ ಮನೆಗೆ ಬೇಟಿ: ತಾಯಿ ಕುಸುಮಾವತಿ ಜೊತೆ ಮಾತುಕತೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸೌಜನ್ಯ ಮನೆಗೆ ಬೇಟಿ: ತಾಯಿ ಕುಸುಮಾವತಿ ಜೊತೆ ಮಾತುಕತೆ

ಬೆಳ್ತಂಗಡಿ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಸೋಮವಾರ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿಯೊಂದಿಗೆ ಮಾತುಕತೆ ನಡೆಸಿದರು. ಧರ್ಮಸ್ಥಳ ದಲ್ಲಿ ನಡೆದ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿ  ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಕುಸುಮಾವತಿ ಅವರು ತಮ್ಮವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು. ಮಾಧ್ಯಮದವರ ಅನುಪಸ್ಥಿತಿಯಲ್ಲಿ ಕುಟುಂಬಸ್ಥರೊಂದಿಗೆ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದಾರೆ. ಹೆಚ್ಚಿನ ಕಾನೂನು ಹೋರಾಟ ನಡೆಸುವುದಾದರೆ ಅದರ ಖರ್ಚನ್ನು ಬಿಜೆಪಿ ವಹಿಸುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗು ಇತರರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ