image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಬಿಜೆಪಿಯ ಪೂರ್ಣ ಬೆಂಬಲವಿದೆ- ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಬಿಜೆಪಿಯ ಪೂರ್ಣ ಬೆಂಬಲವಿದೆ- ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಧರ್ಮಸ್ಥಳ: ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆಗೆ ಸರ್ಕಾರ ಕ್ರಮ ವಹಿಸಿ ಆ ಸಂತ್ರಸ್ತ ಕುಟುಬಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿ. ಈ ವಿಚಾರದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ಕೊಡುತ್ತದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಧರ್ಮಸ್ಥಳ ಚಲೋ ಅಭಿಯಾನದ ಅಂಗವಾಗಿ ಧರ್ಮಸ್ಥಳದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ, ಹಿಂದೂ ಧರ್ಮ ವಿರೋಧಿ ಶಕ್ತಿಗಳು ಕೋಟಿಗಟ್ಟಲೆ ಹಣ ಪಡೆದು ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿವೆ. ಆ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗದು.  ಸಿಬಿಐ ಅಥವಾ ಎನ್ಐಎಯಿಂದ ತನಿಖೆ ಆದರೆ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಆಡಳಿತ ವೈಖರಿಯನ್ನು ಎರಡು ವರ್ಷಗಳಿಂದ ನೋಡುತ್ತಿದ್ದೇವೆ. ಧರ್ಮಸ್ಥಳ ಅಪಪ್ರಚಾರ ತಡೆಯಲು ಸಾಧ್ಯವಾಗದ  ಸರ್ಕಾರ ಚಾಮುಂಡಿ ಬೆಟ್ಟಕ್ಕೆ ಕೈ ಹಾಕಿದೆ. ‌ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೆ ಯಾವ ಹಿಂದೂ ಕಾರ್ಯಕರ್ತರು ನೆಮ್ಮದಿಯಿಂದ ಕೂರಲಾಗದು ಎಂದರು.

Category
ಕರಾವಳಿ ತರಂಗಿಣಿ