ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಶ್ರೀ ಎನ್.ಎಸ್. ಬೋಸು ರಾಜು ಅವರನ್ನು ಭೇಟಿಯಾಗಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯಬೇಕಿರುವ ತಡೆಗೋಡೆ ನಿರ್ಮಾಣ, ಕೆರೆ ಅಭಿವೃದ್ಧಿ, ಸೇತುವೆ ಅಭಿವೃದ್ಧಿ ಮತ್ತು ಇತರ ಸಾರ್ವಜನಿಕ ಬೇಡಿಕೆಗಳ ಕಾಮಗಾರಿಗಳಿಗೆ ಅಗತ್ಯವಾದ ಅನುದಾನವನ್ನು ಒದಗಿಸಲು ಮನವಿ ಸಲ್ಲಿಸಿದರು.
ಈ ಮನವಿಗೆ ಸ್ಪಂದಿಸಿದ ಸಚಿವ ಬೋಸು ರಾಜು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಾದ ಕಾಮಗಾರಿಗಳಿಗೆ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವ ಕುರಿತು ಭರವಸೆ ನೀಡಿದರು.
ಇದಕ್ಕೆ ಪೂರಕವಾಗಿ, ಶಾಸಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತ್ ರಾಜ್ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ (IAS) ಅವರನ್ನು ಕೂಡ ಬೆಂಗಳೂರಿನಲ್ಲಿ ಭೇಟಿಯಾಗಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗ್ರಾಮ ಪಂಚಾಯತಿಗಳು ಪ್ರಸ್ತುತ ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಿದರು.