ಮಂಗಳೂರು : ಸಿದ್ದರಾಮಯ್ಯ ಅವರ ಈ ಹಿಂದಿನ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ.
ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.