image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾನು ಶ್ರಮಿಸಿ ಮಂಜೂರಾದ ಹಣಕ್ಕೆ ಕಾಂಗ್ರೆಸ್‌ನಿಂದ ಪ್ರಚಾರ: ದಾಖಲೆ ಬಿಡುಗಡೆ ಮಾಡಿದ ಶಾಸಕ ವೇದವ್ಯಾಸ್

ನಾನು ಶ್ರಮಿಸಿ ಮಂಜೂರಾದ ಹಣಕ್ಕೆ ಕಾಂಗ್ರೆಸ್‌ನಿಂದ ಪ್ರಚಾರ: ದಾಖಲೆ ಬಿಡುಗಡೆ ಮಾಡಿದ ಶಾಸಕ ವೇದವ್ಯಾಸ್

ಮಂಗಳೂರು: ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಶ್ರಮಿಸಿ ತಂದ ಅನುದಾನದ ಕಾಮಗಾರಿಗಳಿಗೆ ಕಾಂಗ್ರೆಸ್ ನಾಯಕರು ತಾವೇ ಕಾರಣ ಎಂದು ಸುಳ್ಳು ಹೇಳಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಮತ್ತು ಸಣ್ಣತನದ ರಾಜಕಾರಣ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ನಗರದ ಅಟಲ್ ಸೇವಾಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪದ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರ ದಾರಿತಪ್ಪಿಸುತ್ತಿದ್ದಾರೆ ಎಂದು ದಾಖಲೆಗಳನ್ನು ಬಿಡುಗಡೆ ಮಾಡಿದರು.
​ಪ್ರತಿ ವರ್ಷದಂತೆ 2025-26ನೇ ಸಾಲಿನಲ್ಲಿ ಪ್ರಕೃತಿ ವಿಕೋಪದ ಅಡಿಯಲ್ಲಿ ಕೈಗೊಳ್ಳಬೇಕಾದ ತುರ್ತು ಕಾಮಗಾರಿಗಳ ಕುರಿತು ತಾವು ಜನವರಿ 6, 2026 ರಂದು ಜಿಲ್ಲಾಧಿಕಾರಿಗಳಿಗೆ ಅಧಿಕೃತ ಪತ್ರ ಬರೆದಿದ್ದು,  ಸುಮಾರು 10 ಕೋಟಿ ರೂಪಾಯಿ.
​ಕಾಮಗಾರಿಗಳ ಸಂಖ್ಯೆ: 28 ವಿವಿಧ ಅಭಿವೃದ್ಧಿ ಕೆಲಸಗಳು. ಜಿಲ್ಲಾಧಿಕಾರಿಗಳ ಆದೇಶ ಪತ್ರದಲ್ಲಿ ಶಾಸಕರ ಪತ್ರದ ಸಂಖ್ಯೆ ಮತ್ತು ದಿನಾಂಕವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
​ ಹೀಗಿರುವಾಗ ಕಾಂಗ್ರೆಸ್ ನಾಯಕರು ಆ ಸ್ಥಳಗಳಿಗೆ ಭೇಟಿ ನೀಡಿ, ಫೋಟೋ ತೆಗೆಸಿಕೊಂಡು ಇದು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವುದು ಖಂಡನೀಯ," ಎಂದು ಅವರು ಕಿಡಿಕಾರಿದರು.
​ಹಿರಿಯ ವಕೀಲರ ಪದವಿ ಪಡೆದವರು ಕನಿಷ್ಠ ಪ್ರೋಟೋಕಾಲ್ ಮತ್ತು ಸರ್ಕಾರಿ ನಿಯಮಗಳನ್ನು ಅರಿಯದೆ ಇರುವುದು ವಿಷಾದನೀಯ. ಮಹಾನಗರ ಪಾಲಿಕೆಯ ಹೂಳೆತ್ತುವ ಕಾರ್ಯಕ್ಕೂ ತಾವೇ ಹಣ ತಂದಿದ್ದೇವೆ ಎನ್ನುತ್ತಿರುವುದು ಇವರ ಹತಾಶೆಯನ್ನು ತೋರಿಸುತ್ತದೆ ಎಂದರು.
 ಹೂಳೆತ್ತುವ ಕಾರ್ಯ ಪಾಲಿಕೆಯದ್ದಾಗಿದ್ದು, ಅದಕ್ಕೂ ಕಾಂಗ್ರೆಸ್ ಕ್ರೆಡಿಟ್ ಪಡೆಯುತ್ತಿರುವುದು ಹಾಸ್ಯಾಸ್ಪದ.
​"ಸತ್ಯಾಸತ್ಯತೆ ಜನರಿಗೆ ತಿಳಿಯಲಿ ಎಂಬ ಉದ್ದೇಶದಿಂದ ಈ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ. ಅಭಿವೃದ್ಧಿ ಕೆಲಸಗಳಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಜನಪರ ಕೆಲಸ ಮಾಡಲಿ," ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.

Category
ಕರಾವಳಿ ತರಂಗಿಣಿ