image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿಕೆ ಶಿವಕುಮಾರ್ ಯಾವಾಗ ಬಂದರೂ ಸಮಸ್ಯೆ ಇಲ್ಲ, ಅವರ ಪರವಾಗಿ ನಾವು ಇಲ್ಲಿ ಇದ್ದೇವೆ : ಸತೀಶ್ ಜಾರಕಿಹೊಳಿ

ಡಿಕೆ ಶಿವಕುಮಾರ್ ಯಾವಾಗ ಬಂದರೂ ಸಮಸ್ಯೆ ಇಲ್ಲ, ಅವರ ಪರವಾಗಿ ನಾವು ಇಲ್ಲಿ ಇದ್ದೇವೆ : ಸತೀಶ್ ಜಾರಕಿಹೊಳಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಉಳಿದಿರುವ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿರುವ ನಡುವೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಬಂದರೂ ಸಮಸ್ಯೆ ಇಲ್ಲ, ಅವರ ಪರವಾಗಿ ನಾವು ಇಲ್ಲಿ ಇದ್ದೇವೆ ಎಂದು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಡಿಸಿಎಂ ದೆಹಲಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಉಳಿದರೂ ಆಡಳಿತದ ಕಾರ್ಯಗಳಲ್ಲಿ ಯಾವುದೇ ಅಡಚಣೆ ಆಗುವುದಿಲ್ಲ ಎಂದು ತಿಳಿಸಿದರು. "ಡಿಕೆ ಶಿವಕುಮಾರ್ ಪರವಾಗಿ ನಾವು ಎಲ್ಲರೂ ಇದ್ದೇವೆ. ಅವರು ನಾಳೆಯೇ ಬರಲಿ ಅಥವಾ ನಂತರ ಬರಲಿ, ಇಲ್ಲಿ ಕೆಲಸಗಳನ್ನು ನಾವು ನೋಡಿಕೊಳ್ಳುತ್ತೇವೆ" ಎಂದು ಅವರು ಸ್ಪಷ್ಟಪಡಿಸಿದರು. ಡಿಕೆ ಶಿವಕುಮಾರ್ ಭಾನುವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ತೆರಳಿದ್ದರು. ಸೋಮವಾರ ಬೆಂಗಳೂರಿಗೆ ಮರಳುವ ನಿರೀಕ್ಷೆ ಇದ್ದರೂ, ಅವರು ಇನ್ನೂ ದೆಹಲಿಯಲ್ಲೇ ಉಳಿಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

Category
ಕರಾವಳಿ ತರಂಗಿಣಿ