image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟಿವಿಕೆ ಜೊತೆಗಿನ ಮೈತ್ರಿಯ ಕುರಿತು ಬಿಜೆಪಿಯ ಕೇಂದ್ರ ನಾಯಕತ್ವ ತೀರ್ಮಾನವನ್ನು ಕೈಗೊಳ್ಳಲಿದೆ : ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್

ಟಿವಿಕೆ ಜೊತೆಗಿನ ಮೈತ್ರಿಯ ಕುರಿತು ಬಿಜೆಪಿಯ ಕೇಂದ್ರ ನಾಯಕತ್ವ ತೀರ್ಮಾನವನ್ನು ಕೈಗೊಳ್ಳಲಿದೆ : ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆ 2026ರ ದಿನಾಂಕ ಘೋಷಣೆ ಮಾಡಲು ದಿನಗಣನೆ ಆರಂಭವಾಗಿದೆ. ರಾಜ್ಯದ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ಆರಂಭಿಸಿವೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ. ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟ ನಟ ವಿಜಯ್ ಸ್ಥಾಪನೆ ಮಾಡಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹಬ್ಬಿದೆ. ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಮಾತನಾಡಿ, "ಟಿವಿಕೆ ಜೊತೆಗಿನ ಮೈತ್ರಿಯ ಕುರಿತು ಬಿಜೆಪಿಯ ಕೇಂದ್ರ ನಾಯಕತ್ವ ತೀರ್ಮಾನವನ್ನು ಕೈಗೊಳ್ಳಲಿದೆ" ಎಂದು ಹೇಳಿದ್ದಾರೆ.

"ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವನ್ನು ಮೈತ್ರಿ ಮಾತುಕತೆಗೆ ಆಹ್ವಾನ ನೀಡಿದ ಕಾರ್ಯಕರ್ತರನ್ನು ಪಕ್ಷದಿಂದ ಹೊರ ಹಾಕಿರುವುದು ಪಕ್ಷದ ಆಂತರಿಕ ವಿಚಾರವಾಗಿದೆ. ಮೈತ್ರಿಯ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಮಾಡಲಿದ್ದಾರೆ" ಎಂದರು. "ಮುಖ್ಯಮಂತ್ರಿ ಯಾರಾಗಬೇಕು? ಎಂದು ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ. ಎಂ.ಕೆ.ಸ್ಟಾಲಿನ್ ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 200ಕ್ಕೂ ಅಧಿಕ ಸೀಟುಗಳಲ್ಲಿ ಜಯಗಳಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

Category
ಕರಾವಳಿ ತರಂಗಿಣಿ