image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು 'ಕ್ಯಾಶ್ ಕೌ' ಅಥವಾ 'ಹಣವನ್ನು ಕೊಡುವ ಕಾಮಧೇನು' ಮಾಡಿಕೊಂಡಿದೆ : ಐಶ್ವರ್ಯಾ ಅನಂತ ಕುಮಾರ್

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು 'ಕ್ಯಾಶ್ ಕೌ' ಅಥವಾ 'ಹಣವನ್ನು ಕೊಡುವ ಕಾಮಧೇನು' ಮಾಡಿಕೊಂಡಿದೆ : ಐಶ್ವರ್ಯಾ ಅನಂತ ಕುಮಾರ್

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು 'ಕ್ಯಾಶ್ ಕೌ' ಅಥವಾ 'ಹಣವನ್ನು ಕೊಡುವ ಕಾಮಧೇನು' ಮಾಡಿಕೊಂಡಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ದಿವಂಗತ ಬಿಜೆಪಿ ನಾಯಕ ಅನಂತ ಕುಮಾರ್ ಅವರ ಪುತ್ರಿ ಐಶ್ವರ್ಯಾ ಅನಂತ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಶ್ವರ್ಯ ಅನಂತ್ ಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. 'ಮತ್ತೆ ಅದೇ ಕಥೆ ಶುರುವಾಗಿದೆ. ಮುಂಬರುವ ಅಸ್ಸಾಂ ಚುನಾವಣೆಯ ರಾಜಕೀಯ ಪ್ರಚಾರಗಳಿಗೆ ಹಣ ಒದಗಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಕರ್ನಾಟಕವನ್ನು 'ನಗದು ಹಸು' ಆಗಿ ಬಳಸಿಕೊಳ್ಳಲು ತಂತ್ರ ಹೂಡುತ್ತಿದೆ' ಎಂದು ನೇರವಾಗಿ ಆರೋಪಿಸಿದ್ದಾರೆ. ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಅನಂತ್ ಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಹಣಕಾಸಿನ ಆರೋಪ ಮಾಡುವ ಮೂಲಕ ರಾಜಕೀಯ ಸಂಚಲನ ಸೃಷ್ಟಿಸಿದ್ದಾರೆ.

ನಮ್ಮ ರಾಜ್ಯ ಸಾಲದ ಸುಳಿಗೆ ಸಿಲುಕಿದ್ದರೂ, ಡಿ.ಕೆ. ಶಿವಕುಮಾರ್ ಅವರೇ ಕಾಂಗ್ರೆಸ್ ಹೈಕಮಾಂಡ್‌ಗೆ ನೀವೇಕೆ ಹಣ ನೀಡುವ ಪಾತ್ರವನ್ನು ನಿರ್ವಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. 'ಡಿ.ಕೆ. ಶಿವಕುಮಾರ್ ಸರ್, ಕರ್ನಾಟಕಕ್ಕೆ ನಿಮ್ಮ ನಿಷ್ಠೆ ಎಲ್ಲಕ್ಕಿಂತ ಮಿಗಿಲು ಎಂದು ನೀವು ಪದೇ ಪದೇ ಹೇಳುತ್ತಿರುತ್ತೀರಿ. ಹಾಗಿರುವಾಗ, ರಾಜ್ಯವು ಭಾರಿ ಸಾಲದ ಸುಳಿಯಲ್ಲಿ ಸಿಲುಕಿರುವಾಗ ಕಾಂಗ್ರೆಸ್ ಹೈಕಮಾಂಡ್‌ಗಾಗಿ ನೀವು ಈ ಪಾತ್ರವನ್ನು ಏಕೆ ನಿರ್ವಹಿಸುತ್ತಿದ್ದೀರಿ?' ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿರುವ ಐಶ್ವರ್ಯ, ಅವರ ನಿಷ್ಠೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

Category
ಕರಾವಳಿ ತರಂಗಿಣಿ