image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಬಂಟರ ಸಂಘಗಳ ಪ್ರಮುಖರ ಜೊತೆ ಸಭೆ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಬಂಟರ ಸಂಘಗಳ ಪ್ರಮುಖರ ಜೊತೆ ಸಭೆ

ದಾವಣಗೆರೆ :ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಕ್ಷದ ವಿಜಯೋತ್ಸವಕ್ಕಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಕ್ಷೇತ್ರದ ಚುನಾವಣಾ ಮೇಲುಸ್ತುವಾರಿಯಾದ  ಮಂಜುನಾಥ ಭಂಡಾರಿ ಅವರು ಭರ್ಜರಿ ತಯಾರಿ ನಡೆಸಿದ್ದಾರೆ. 
ಶನಿವಾರದಂದು ಹಿರಿಯ ನಾಯಕರನ್ನೊಳಗೊಂಡ ತಂಡದೊಂದಿಗೆ ಅವರು ಕ್ಷೇತ್ರದಾದ್ಯಂತ ಬಿರುಸಿನ ಸಂಚಾರ ನಡೆಸಿ ಕಾರ್ಯಕರ್ತರಿಗೆ ಪ್ರಚಾರದ ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಬಂಟರ ಸಂಘದ ಪ್ರಮುಖರ ಜೊತೆಗೆ ಸಭೆ ನಡೆಸಿದ ಅವರು ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಸಮಾಜದ ಪ್ರತಿಯೊಬ್ಬ ಮತದಾರರನ್ನು ತಲುಪುವ ಯೋಜನೆಯನ್ನು ರೂಪಿಸಿದರು.
ಪಕ್ಷದ ಶಾಸಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ