image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಸೋಲಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಕರೆ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಸೋಲಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಕರೆ

ದಾವಣಗೆರೆ: ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಮತ್ತು ಶ್ರಮಿಕ ವರ್ಗದ ವಿರೋಧಿಯಾಗಿದ್ದು, ಮುಂಬರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಅವರು ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "2014ರಲ್ಲಿ 400 ರೂಪಾಯಿ ಇದ್ದ ಗ್ಯಾಸ್ ಸಿಲಿಂಡರ್ ಬೆಲೆ ಇಂದು 950 ರೂಪಾಯಿ ದಾಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಬೆಲೆ ಏರಿಕೆಯಿಂದ ಸ್ವತಃ ಬಿಜೆಪಿ ಕಾರ್ಯಕರ್ತರೇ ಕಂಗಾಲಾಗಿದ್ದು, ಈ ಉಪಚುನಾವಣೆಯಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಆಕ್ರೋಶ ಹೊರಹಾಕಬೇಕು" ಎಂದು ತಿಳಿಸಿದರು.

ಕರ್ನಾಟಕಕ್ಕೆ ಬರಬೇಕಿದ್ದ ಅಂದಾಜು 1.25 ಲಕ್ಷ ಕೋಟಿ ರೂಪಾಯಿ ತೆರಿಗೆ ಪಾಲು, 15ನೇ ಹಣಕಾಸು ಆಯೋಗದ ಅನುದಾನ ಹಾಗೂ ಮಹಾದಾಯಿ ಯೋಜನೆಯ ಹಣವನ್ನು ಪ್ರಧಾನಿ ಮೋದಿ ಅವರಿಂದ ಕೊಡಿಸುವ ಕೆಲಸವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೊದಲು ಮಾಡಲಿ ಎಂದು ಭಂಡಾರಿ ಸವಾಲು ಹಾಕಿದರು. ಕೇವಲ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ದಾವಣಗೆರೆಯನ್ನು ವಿದ್ಯಾ ನಗರಿಯನ್ನಾಗಿ ರೂಪಿಸಿದ ಕೀರ್ತಿ ಶಾಮನೂರು ಶಿವಶಂಕರಪ್ಪ ಅವರಿಗೆ ಸಲ್ಲುತ್ತದೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಪ್ರಲ್ಹಾದ್ ಜೋಶಿ ಅವರಿಗೆ ಯಡಿಯೂರಪ್ಪ ಕುಟುಂಬ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ನ ಕುಟುಂಬ ರಾಜಕಾರಣ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಪ್ರತಿಪಾದಿಸಿದರು.

Category
ಕರಾವಳಿ ತರಂಗಿಣಿ