image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯಗಳ ಅಭಿಪ್ರಾಯ ಪಡೆಯದೇ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪಿಕೊಳ್ಳುವುದಿಲ್ಲ' : ಎಂ ಕೆ ಸ್ಟಾಲಿನ್

ರಾಜ್ಯಗಳ ಅಭಿಪ್ರಾಯ ಪಡೆಯದೇ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪಿಕೊಳ್ಳುವುದಿಲ್ಲ' : ಎಂ ಕೆ ಸ್ಟಾಲಿನ್

ಚೆನ್ನೈ: 'ನ್ಯಾಯಯುತವಾಗಿ ಕ್ಷೇತ್ರ ಪುನರ್‌ವಿಂಗಡಣೆಯಾಗಬೇಕೆಂದು ದಕ್ಷಿಣ ಭಾರತ ಬಯಸುತ್ತದೆ ಮತ್ತು ಈ ವಿಚಾರವಾಗಿ ರಾಜ್ಯಗಳ ಅಭಿಪ್ರಾಯ ಪಡೆಯದೇ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪಿಕೊಳ್ಳುವುದಿಲ್ಲ' ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಿಳಿಸಿದ್ದಾರೆ. 'ಶಾಂತವಾಗಿರುವ ದಕ್ಷಿಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿರುಗಾಳಿ ಎಬ್ಬಿಸಬಾರದು' ಎಂದು ಎಚ್ಚರಿಸಿದ ಸ್ಟಾಲಿನ್ ಅವರು ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾರತ ಸರ್ವಾಧಿಕಾರದತ್ತ ಜಾರುತ್ತಿದೆಯೇ?' ಎಂಬ ಶೀರ್ಷಿಕೆಯಡಿ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್, 'ದಕ್ಷಿಣದ ಜನರು ಎತ್ತಿರುವ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ನ್ಯಾಯಯುತವಾಗಿ ಉತ್ತರಿಸಬೇಕು. ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯನ್ನು ಹೇಗೆ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎನ್ನುವುದನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಏಕೆ ಮುಚ್ಚಿಡುತ್ತಿದೆ' ಎಂದು ಪ್ರಶ್ನಿಸಿದ್ದಾರೆ.

'2001ರಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿ ಅವರು ರಾಷ್ಟ್ರೀಯ ಹಿತಾಸಕ್ತಿಯ ಕಾರಣಕ್ಕೆ ಕ್ಷೇತ್ರ ಪುನರ್‌ವಿಂಗಡಣೆಯನ್ನು 25 ವರ್ಷ ಮೂಂದೂಡಿದ್ದರು. ಅದೇ ನಿರ್ಧಾರವನ್ನು ಮುಂದುವರಿಸಬೇಕೆಂಬ ದಕ್ಷಿಣ ರಾಜ್ಯಗಳ ಬೇಡಿಕೆಗೆ ಪ್ರಧಾನಿ ಮೋದಿ ಅವರ ಉತ್ತರವೇನು' ಎಂದು ಪ್ರಶ್ನಿಸಿದರು. 'ನೀವು ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದೀರಿ? ಸರ್ವಪಕ್ಷಗಳ ಅಭಿಪ್ರಾಯ ಪಡೆಯದೇ ಸಾಂವಿಧಾನಿಕ ತಿದ್ದುಪಡಿಗಳನ್ನು ಮಾಡುವುದು ಸರ್ವಾಧಿಕಾರವಲ್ಲದೇ ಮತ್ತೇನು?' ಎಂದಿದ್ದಾರೆ. 'ದಕ್ಷಿಣ ರಾಜ್ಯಗಳ ಹಕ್ಕನ್ನು ಬದಿಗಿಟ್ಟು, ಉತ್ತರ ರಾಜ್ಯಗಳಿಗೆ ಹೆಚ್ಚು ಅಧಿಕಾರ ನೀಡುವ ಯಾವುದೇ ಪ್ರಯತ್ನವನ್ನು ಡಿಎಂಕೆ ಬೆಂಬಲಿಸುವುದಿಲ್ಲ. ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದ ಪ್ರಧಾನಿ ಅವರು ನಾಗರಿಕರ ಪ್ರಶ್ನೆಗಳಿಗಾದರೂ ಉತ್ತರಿಸುವರೇ ಎಂದು ತಿಳಿಯಲು ಬಯಸುತ್ತೇವೆ' ಎಂದು ಹೇಳಿದ್ದಾರೆ.

Category
ಕರಾವಳಿ ತರಂಗಿಣಿ