image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದೆಹಲಿಗೆ ತೆರಳಿರುವ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್!

ದೆಹಲಿಗೆ ತೆರಳಿರುವ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್!

ಬೆಂಗಳೂರು : ಸಂಪುಟ ಪುನಾರಚನೆ ಮತ್ತು ಮಂತ್ರಿ ಸ್ಥಾನಕ್ಕೆ ದೆಹಲಿಗೆ ತೆರಳಿರುವ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್ ನೀಡಿದ್ದು, ಅನಾವಶ್ಯಕ ಗೊಂದಲ ಸೃಷ್ಟಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ಸಂಪುಟ ಪುನಾರಚನೆ ಮಾಡಬೇಕು ಮತ್ತು ಬೇರೆ ಶಾಸಕರಿಗೂ ಮಂತ್ರಿಯಾಗುವ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನ ಕೆಲ ಶಾಸಕರ ಗುಂಪು ದೆಹಲಿಗೆ ಹಾರಿದೆ. ಇನ್ನು ಕೈ ಶಾಸಕರ ದೆಹಲಿ ಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 'ಪಕ್ಷದ ಹೈಕಮಾಂಡ್ ಅವರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಮತ್ತು ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ಗುಂಪು ಹೈಕಮಾಂಡ್ ಅನ್ನು ಭೇಟಿ ಮಾಡುವ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡದಂತೆ ಎಲ್ಲಾ ಶಾಸಕರಿಗೆ ಮನವಿ ಮಾಡುತ್ತೇನೆ' ಎಂದರು.

'ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಪಕ್ಷದ ಚೌಕಟ್ಟಿನ ಒಳಗೆ ಎಲ್ಲಾ ಶಾಸಕರು ಮಾತನಾಡಬೇಕು. ಕೆಲವರು ಏನೇನು​ ಮಾತನಾಡಿದ್ದಾರೋ ಎಲ್ಲವನ್ನೂ ಗಮನಿಸಿದ್ದೇನೆ. ಆದರೆ ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ. ಪಾರ್ಟಿಯಲ್ಲೇ ಎಲ್ಲರ ಭವಿಷ್ಯವಿದೆ, ಪಕ್ಷದ ಚೌಕಟ್ಟಿನೊಳಗೆ ಇರಬೇಕು. ಇದು ಸಂಪುಟ ಪುನಾರಚನೆ ಕೇಳುವ ಟೈಂ ಅಲ್ಲ. ಈಗ ಮಂತ್ರಿ ಮಾಡೋ ಟೈಂ ಅಲ್ಲ, ಮೊದಲು ಚುನಾವಣೆ ಮಾಡೋಣ ಎಂದು ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ