image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅರುಣ್ ಉಲ್ಲಾಳ್ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ -ಸತೀಶ್ ಕುಂಪಲ

ಅರುಣ್ ಉಲ್ಲಾಳ್ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ -ಸತೀಶ್ ಕುಂಪಲ

ಮಂಗಳೂರು: ಸುಶಿಕ್ಷಿತಾ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೆಲವು ಕ್ರಿಶ್ಚಿಯನ್ ಸಂಸ್ಥೆಗಳ ನಡವಳಿಕೆ ಖಂಡನೀಯವಾಗಿವೆ. ಇತ್ತೀಚೆಗೆ ಉಳ್ಳಾಲದಲ್ಲಿ ಅನೇಕ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜೊತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಅತ್ಯಂತ ಮುಗ್ಧ ಸ್ವಭಾವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಅರುಣ್ ಉಳ್ಳಾಲ್ ರವರು ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು ಕೌಟುಂಬಿಕ ಸಂಗತಿಗಳ ಬಗ್ಗೆ ಬೋಧನೆ ಮಾಡುತ್ತ, ಹಿಂದೂ ಸಮಾಜದ ಮಕ್ಕಳು ಹಿಂದೂ ಸಂಸ್ಕೃತಿಯ ಸಂಸ್ಕಾರ ನೀಡುವ ಶಾಲೆಗಳಿಗೆ ಹೋದರೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುವುದನ್ನೆ ನೆಪ ಮಾಡಿಕೊಂಡು ಅವರ ಮೇಲೆ ಕೇಸು ದಾಖಲಿಸಿ ಅವರ ಉಪನ್ಯಾಸ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಯಿಂದ ಕ್ರಮ ತೆಗೆದುಕೊಂಡಿರುವುದು ಖಂಡನೀಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಅನೇಕ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಜನೆಗೆ ಹಿಂದೂ ಮಕ್ಕಳು ಬೇಕು , ಹಿಂದೂ ವಿಚಾರ ಮಾತನಾಡಿದ್ದಕ್ಕೆ ಕ್ರಮ ಕೈಗೊಳ್ಳುವ ಕ್ರಿಶ್ಚಿಯನ್ ಸಂಸ್ಥೆಗಳು ಹಿಂದೂ ಮಕ್ಕಳ ದಾಖಲಾತಿ ಬಗ್ಗೆ ಕೂಡ ನಿಮ್ಮ ನಿಲುವು ಸ್ಪಷ್ಟಪಡಿಸಲಿ. ಹಿಂದುಗಳು ಈ ಜಿಲ್ಲೆಯ ಯಾವ ರೀತಿಯ ಕೋಮು ಭಾವನೆಗಳಿಲ್ಲದೆ ಮುಕ್ತವಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಂಸ್ಥೆಯ ಶಾಲೆಗಳಿಗೆ ಹೋಗುತ್ತಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದೆ ಕ್ರಿಶ್ಚಿಯನ್ ಸಂಸ್ಥೆಯ ಶಾಲೆಗಳಲ್ಲಿ ಶಿಕ್ಷಕಿ ಒಬ್ಬರು ಹಿಂದೂ ದೇವರ ಬಗ್ಗೆ ಕೀಳಾಗಿ ಮಾತನಾಡಿದ ಘಟನೆ ನಡೆದಾಗ ಆ ಶಿಕ್ಷಕಿ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಅದರ ಬದಲಾಗಿ ಪ್ರಶ್ನಿಸಿದ ಜನಪ್ರತಿನಿಧಿಗಳ ಮೇಲೆ ಕೇಸು ದಾಖಲಿಸಿದ್ದರು.ಈಗ ಮತ್ತೆ ಹಿಂದೂ ಸಂಸ್ಕೃತಿ ಬಗ್ಗೆ ಮಾತನಾಡಿದ ಉಪನ್ಯಾಸಕರ ಮೇಲೆ ಕೇಸು ದಾಖಲು ಮಾಡುವ ಮೂಲಕ, ಸರಕಾರ ಕೂಡ ಸಮಾಜದಲ್ಲಿ ಅಶಾಂತಿ, ಅಸಮಾನತೆಗೆ ಪ್ರೋತ್ಸಾಹಿಸುವವರ ಪರವಾಗಿ ನಿಂತಿರುವುದು ಖಂಡನೀಯ. ತಕ್ಷಣವೇ ಅರುಣ್ ಉಲ್ಲಾಳರ ಮೇಲೆ ಹಾಕಿರುವ ಕೇಸ್ ಅನ್ನು ವಾಪಸ್ ತೆಗೆದುಕೊಂಡು ಸಮಾಜದಲ್ಲಿ ಶಾಂತಿ,  ಸುವ್ಯವಸ್ಥೆ ಕಾಪಾಡುವುದಕ್ಕೆ ಎಲ್ಲ ಸಮಾಜದವರು ಕೈ ಜೋಡಿಸಬೇಕು. ಸರಕಾರ ಕೂಡ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಆಗ್ರಹಿಸಿದೆ

Category
ಕರಾವಳಿ ತರಂಗಿಣಿ