image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಆಗದಂತೆ ತಡೆದ ಕಾಂಗ್ರೆಸ್ ವಿರುದ್ದ ಬಿಜೆಪಿ ಮಹಿಳಾ ಮೋರ್ಚಾದಿಂದ ಜನಾಕ್ರೋಶ ಪ್ರತಿಭಟನಾ ಪಾದಯಾತ್ರೆ

ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಆಗದಂತೆ ತಡೆದ ಕಾಂಗ್ರೆಸ್ ವಿರುದ್ದ ಬಿಜೆಪಿ ಮಹಿಳಾ ಮೋರ್ಚಾದಿಂದ ಜನಾಕ್ರೋಶ ಪ್ರತಿಭಟನಾ ಪಾದಯಾತ್ರೆ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹಿಳಾ ಮೀಸಲಾತಿ ವಿಧೇಯಕವನ್ನು ತಡೆಹಿಡಿಯುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇಂದು ಬೃಹತ್ 'ಜನಾಕ್ರೋಶ ಪ್ರತಿಭಟನಾ ಪಾದಯಾತ್ರೆ'ಯನ್ನು ಹಮ್ಮಿಕೊಳ್ಳಲಾಗಿತ್ತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

​ನಗರದ ಬಿ.ಜೆ.ಪಿ ಕಚೇರಿಯಿಂದ ಮಂಗಳೂರು ಮಹಾನಗರ ಪಾಲಿಕೆಯವರೆಗೆ ನಡೆದ ಈ ಪಾದಯಾತ್ರೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
​ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ 'ನಾರಿ ಶಕ್ತಿ ವಂದನಾ' ಕಾಯ್ದೆಯನ್ನು ತಂದಿದ್ದರೂ, ಕಾಂಗ್ರೆಸ್ ಅದನ್ನು ಜಾರಿಗೆ ತರಲು ಅಡ್ಡಿಪಡಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, "ಕಾಂಗ್ರೆಸ್ ಪಕ್ಷವು ಸದಾ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡುವುದನ್ನು ಸಹಿಸದ ಕಾಂಗ್ರೆಸ್, ಮೀಸಲಾತಿ ವಿಧೇಯಕದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ," ಎಂದು ಕಿಡಿಕಾರಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಈ ಮಹಿಳಾ ವಿರೋಧಿ ನೀತಿಯನ್ನು ಮನೆ ಮನೆಗೆ ತಲುಪಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು  ಎಚ್ಚರಿಸಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

​ಪ್ರತಿಭಟನಾಕಾರರು ಕೈಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬರೆಯಲಾದ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯ ಮೂಲಕ ಪಾಲಿಕೆ ಕಚೇರಿಗೆ ತೆರಳಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಮಹಿಳಾ ಮೋರ್ಚಾದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ