image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂತ್ರಿಗಳಿಗೆ ಮೊದಲ ದಿನವೇ ಖಡಕ್ ವಾರ್ನಿಂಗ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್: 24/7 ಕೆಲಸ ಮಾಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ

ಮಂತ್ರಿಗಳಿಗೆ ಮೊದಲ ದಿನವೇ ಖಡಕ್ ವಾರ್ನಿಂಗ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್: 24/7 ಕೆಲಸ ಮಾಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಭಾರಿ ಶಾಕ್ ನೀಡಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲೇ ಸಚಿವರಿಗೆ ಚುರುಕು ಮುಟ್ಟಿಸಿರುವ ಅವರು, ಆಡಳಿತ ವಿಚಾರದಲ್ಲಿ ಯಾವುದೇ ರೀತಿಯ ಮೈಗಳ್ಳತನ ಅಥವಾ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಕಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಸಭೆಯಲ್ಲಿ ಸಚಿವರಿಗೆ ಕಟ್ಟುನಿಟ್ಟಿನ ಆದೇಶ ನೀಡಿರುವ ಮುಖ್ಯಮಂತ್ರಿಗಳು, "ಯಾವ ಮಂತ್ರಿಗಳನ್ನೂ ನಾನು ಸುಮ್ಮನೇ ಬಿಡುವುದಿಲ್ಲ. ಎಲ್ಲರೂ ದಿನದ 24 ಗಂಟೆಯೂ ಸಕ್ರಿಯವಾಗಿ ಕೆಲಸ ಮಾಡಬೇಕು. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಬೇಕು. ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ತಕ್ಷಣವೇ ಪರಿಹಾರ ಒದಗಿಸಬೇಕು," ಎಂದು ಸೂಚಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ತಮ್ಮ ಆಡಳಿತ ಶೈಲಿಯಲ್ಲಿ ಅತ್ಯಂತ ಖಡಕ್ ವ್ಯಕ್ತಿ ಎಂಬುದು ಮೊದಲ ದಿನವೇ ಸಾಬೀತಾಗಿದೆ. ತಮ್ಮ ಆದೇಶ ಹಾಗೂ ಮಾರ್ಗಸೂಚಿಗಳಿಗೆ ಸರಿಯಾದ ಬೆಲೆ ಕೊಡದೇ ಹೋದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಾವು ಹಿಂದೆ-ಮುಂದೆ ನೋಡುವುದಿಲ್ಲ ಎಂಬ ಬಲವಾದ ಸಂದೇಶವನ್ನು ರವಾನಿಸುವ ಮೂಲಕ ಸಚಿವ ಸಂಪುಟಕ್ಕೆ ಮೊದಲ ದಿನವೇ ಬಿಸಿ ಮುಟ್ಟಿಸಿದ್ದಾರೆ.

Category
ಕರಾವಳಿ ತರಂಗಿಣಿ