image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿ.ಕೆ. ಶಿವಕುಮಾರ್ ಮತ್ತು ಬಿ.ಕೆ. ಹರಿಪ್ರಸಾದ್ ಅವರಿಗೆ ಡಾ. ಮಂಜುನಾಥ ಭಂಡಾರಿ ಅಭಿನಂದನೆ

ಡಿ.ಕೆ. ಶಿವಕುಮಾರ್ ಮತ್ತು ಬಿ.ಕೆ. ಹರಿಪ್ರಸಾದ್ ಅವರಿಗೆ ಡಾ. ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಮುತ್ಸದ್ದಿತನ ಮತ್ತು ಅನುಭವದಿಂದ ರಾಜ್ಯವು ಸುಶಾಸನ ಕಾಣಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಿ.ಕೆ. ಹರಿಪ್ರಸಾದ್ ಅವರ ಸಂಘಟನಾ ಚಾತುರ್ಯವು ಪಕ್ಷಕ್ಕೆ ಹೊಸ ಚೈತನ್ಯ ತುಂಬಲಿದ್ದು, ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲಿದೆ ಎಂದು ತಿಳಿಸಿದ್ದಾರೆ. ಈ ನವ  ನಾಯಕತ್ವವು ರಾಜ್ಯದ ಅಭಿವೃದ್ಧಿ ಮತ್ತು ಪಕ್ಷದ ಯಶಸ್ಸಿಗೆ ದಾರಿಯಾಗಲಿ ಎಂದು ಡಾ. ಭಂಡಾರಿ ಶುಭ ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ