image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಸ್ಥಗಿತ: ಲಕ್ಷಾಂತರ ಮಹಿಳೆಯರಿಗೆ ರಾಜ್ಯ ಸರ್ಕಾರ ದ್ರೋಹ - ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

ಗೃಹಲಕ್ಷ್ಮೀ ಯೋಜನೆ ಸ್ಥಗಿತ: ಲಕ್ಷಾಂತರ ಮಹಿಳೆಯರಿಗೆ ರಾಜ್ಯ ಸರ್ಕಾರ ದ್ರೋಹ - ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: "ಬಿಪಿಎಲ್ ಅಥವಾ ಎಪಿಎಲ್ ಯಾವುದೇ ಕಾರ್ಡ್ ಹೊಂದಿದ್ದರೂ ನಿಮ್ಮ ಖಾತೆಗೆ ಟಕ ಟಕ ಹಣ ಹಾಕುತ್ತೇವೆ" ಎಂದು ಚುನಾವಣೆಗೂ ಮುನ್ನ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಬಿಪಿಎಲ್ ಕಾರ್ಡ್‌ನ ನೆಪವೊಡ್ಡಿ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಸಿಗಬೇಕಿದ್ದ ಹಣವನ್ನು ಸ್ಥಗಿತಗೊಳಿಸುವ ಮೂಲಕ ದೊಡ್ಡ ಮಟ್ಟದ 'ಸರ್ಜಿಕಲ್ ಸ್ಟ್ರೈಕ್' ನಡೆಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ರಾಜ್ಯದ 1.26 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಎರಡು ಕಂತುಗಳ ಸುಮಾರು ₹5,000 ಕೋಟಿ ಹಣವನ್ನು ಪಾವತಿಸದೆ ಫಲಾನುಭವಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

​ದಾಖಲೆಗಳ ಮರುಪರಿಶೀಲನೆ ಮತ್ತು ತನಿಖೆಯ ನೆಪದಲ್ಲಿ ನೈಜ ಫಲಾನುಭವಿಗಳನ್ನು ಯೋಜನೆಯಿಂದ ಕೈಬಿಡುವ ಹುನ್ನಾರ ನಡೆದಿದೆ ಎಂದು ದೂರಿದ ಅವರು, ಸುಮಾರು 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎಂಬ ಕಾರಣ ನೀಡಿ, ಅರ್ಹ ಮಹಿಳೆಯರಿಗೂ ಹಣ ತಲುಪದಂತೆ ತಡೆಯಲಾಗುತ್ತಿದೆ ಎಂದರು.

​ಸಚಿವೆಯೊಬ್ಬರು ಈ ಹಿಂದೆ ಎಲ್ಲಾ ಕಂತುಗಳನ್ನು ಪಾವತಿಸಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದನ್ನು ಉಲ್ಲೇಖಿಸಿದ ಭರತ್ ಶೆಟ್ಟಿ, ನಂತರದ ದಿನಗಳಲ್ಲಿ ಬಾಕಿ ಇರುವುದನ್ನು ಒಪ್ಪಿಕೊಂಡಿದ್ದು ಸರ್ಕಾರದ ಗೊಂದಲಕ್ಕೆ ಸಾಕ್ಷಿಯಾಗಿದೆ. ಒಟ್ಟಾರೆಯಾಗಿ ₹5,000 ಕೋಟಿ ಹಣ ಎಲ್ಲಿ ಹೋಯಿತು ಎಂಬುದಕ್ಕೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Category
ಕರಾವಳಿ ತರಂಗಿಣಿ