image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿ ಅಭಿವೃದ್ಧಿಗೆ ವಿರೋಧ: ‘ನೋ ಡೆವಲಪ್ಮೆಂಟ್ ಜೋನ್’ ಕುರಿತಾಗಿ ಆಪ್ ಆಕ್ರೋಶ

ಕರಾವಳಿ ಅಭಿವೃದ್ಧಿಗೆ ವಿರೋಧ: ‘ನೋ ಡೆವಲಪ್ಮೆಂಟ್ ಜೋನ್’ ಕುರಿತಾಗಿ ಆಪ್ ಆಕ್ರೋಶ

ಬೆಂಗಳೂರು: ಕರಾವಳಿ ಪ್ರದೇಶಗಳ ಸಂರಕ್ಷಣೆಗೆ ಸಂಬಂಧಿಸಿದಂತೆ “ನೋ ಡೆವಲಪ್ಮೆಂಟ್ ಜೋನ್” (No-Development Zones) ಘೋಷಣೆ ಮಾಡುವ ಮೂಲಕ ಜನಜೀವನ ಮತ್ತು ಸ್ಥಳೀಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಪರಿಸರ ಸಂರಕ್ಷಣೆ ಹೆಸರಿನಲ್ಲಿ ಕರಾವಳಿಯ ಜನರ ಹಕ್ಕುಗಳನ್ನು ಕುಗ್ಗಿಸಲಾಗುತ್ತಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕರಾವಳಿ ಪ್ರದೇಶಗಳಿಗೆ ಸಂಬಂಧಿಸಿದ ನೀತಿಗಳು ಜನರಿಗೆ ಅನ್ಯಾಯವಾಗುವ ರೀತಿಯಲ್ಲಿ ಜಾರಿಗೆ ಬರುತ್ತಿವೆ. ವಿಶೇಷವಾಗಿ, ಸ್ಥಳೀಯ ನಿವಾಸಿಗಳು, ಮೀನುಗಾರರು ಮತ್ತು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆ ಉಂಟಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಕೆಲವು ಯೋಜನೆಗಳು ಮುಂದುವರಿಯುತ್ತಿದ್ದರೆ, ಇನ್ನೊಂದೆಡೆ ಸಾಮಾನ್ಯ ಜನರ ಮೂಲಭೂತ ಹಕ್ಕುಗಳಿಗೆ ನಿರ್ಬಂಧ ಹೇರುತ್ತಿರುವುದು ವಿರೋಧಾಭಾಸವಾಗಿದೆ ಎಂದು ಆಪ್ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸೇರಿದಂತೆ ವಿವಿಧ ಸಂಸ್ಥೆಗಳ ಯೋಜನೆಗಳಿಂದ ಪರಿಸರ ಹಾನಿ ಹೆಚ್ಚುತ್ತಿರುವುದಾಗಿ ಪಕ್ಷ ಕಳವಳ ವ್ಯಕ್ತಪಡಿಸಿದೆ. ಕರಾವಳಿ ಪ್ರದೇಶಗಳಲ್ಲಿ ಯಾವುದೇ ಯೋಜನೆಗಳನ್ನು ಜಾರಿಗೆ ತರುವ ಮೊದಲು ಸ್ಥಳೀಯರ ಅಭಿಪ್ರಾಯ ಪಡೆದು, ಪರಿಸರ ಹಾಗೂ ಜನಜೀವನದ ಮೇಲೆ ಬೀರುವ ಪರಿಣಾಮಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದೆ.

ಈ ಹಿನ್ನೆಲೆಯಲ್ಲಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಆಮ್ ಆದ್ಮಿ ಪಕ್ಷವು ಸರ್ಕಾರಕ್ಕೆ ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಕರಾವಳಿ ಪ್ರದೇಶಗಳಲ್ಲಿ ಜಾರಿಯಲ್ಲಿರುವ ನಿಯಮಗಳನ್ನು ಮರುಪರಿಶೀಲಿಸಿ, ಜನಪರ ನೀತಿಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದೆ. ಪತ್ರಿಕಾಗೋಷ್ಟಿಯಲ್ಲಿ ವಿವೇಕಾನಂದ ಸಾಲಿನ್ಸ್, ಎಸ್. ಎಲ್ ಪಿಂಟೋ, ವಾಸುದೇವ್, ಸೀಮಾ ಮಡಿವಾಳ, ಕಬೀರ್ ಕಾಟಿಪಳ್ಳ, ಶಾಲೆಟ್ ಪಿಂಟೋ ಮತ್ತು ಹಬೀಬ್ ಖಾದರ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ