image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಂಜಾಬ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಿಎಂ ಭಗವಂತ ಮಾನ್‌ ಸ್ಪಷ್ಟನೆ

ಪಂಜಾಬ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಿಎಂ ಭಗವಂತ ಮಾನ್‌ ಸ್ಪಷ್ಟನೆ

ಚಂಡೀಗಢ : ನೀಟ್‌ ಪರೀಕ್ಷಾ ಅಕ್ರಮದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ (ಎಎಪಿ) ಆಡಳಿತದಲ್ಲಿರುವ ಪಂಜಾಬ್‌ನಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಭುಗಿಲೆದ್ದಿದ್ದು, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಬೆಳವಣಿಗೆಯಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ, ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೂ ಒತ್ತಾಯಿಸಿದೆ.

ಈ ಆರೋಪಗಳಿಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿರುವ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್, "ಎಎಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒಂದೇ ಒಂದು ಪ್ರಶ್ನೆಪತ್ರಿಕೆಯೂ ಸೋರಿಕೆಯಾಗಿಲ್ಲ" ಎಂದು ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.

ಇತ್ತೀಚೆಗೆ ನಡೆದ ಫಾರ್ಮಸಿ ಆಫೀಸರ್ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿತ್ತಷ್ಟೇ. ಆ ಹೈಟೆಕ್ ಅಂತರರಾಜ್ಯ ನಕಲಿ ದಂಧೆಯನ್ನು ಪಂಜಾಬ್ ಪೊಲೀಸರು ತಕ್ಷಣವೇ ಮಟ್ಟಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ತಮ್ಮ ಸರ್ಕಾರ ಬಂದ ಮೇಲೆ ಅರ್ಹತೆಯ ಒಂದೇ ಒಂದು ಮಾನದಂಡದ ಆಧಾರದ ಮೇಲೆಯೇ 68,585 ಸರ್ಕಾರಿ ಹುದ್ದೆಗಳನ್ನು ಪಾರದರ್ಶಕವಾಗಿ ನೀಡಲಾಗಿದೆ ಎಂದು ಮಾನ್ ಪ್ರತಿಪಾದಿಸಿದ್ದಾರೆ.

Category
ಕರಾವಳಿ ತರಂಗಿಣಿ