image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಿಎಂ ಮೋದಿ ಸೆಲ್ಫಿ ವಿಡಿಯೋಗೆ ಸಿಜೆಪಿ ನಾಯಕನ ಲೇವಡಿ: ಜಾಲತಾಣದಲ್ಲಿ ತೀವ್ರ ಆಕ್ರೋಶ

ಪಿಎಂ ಮೋದಿ ಸೆಲ್ಫಿ ವಿಡಿಯೋಗೆ ಸಿಜೆಪಿ ನಾಯಕನ ಲೇವಡಿ: ಜಾಲತಾಣದಲ್ಲಿ ತೀವ್ರ ಆಕ್ರೋಶ

ನವದೆಹಲಿ : ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ-2026ಕ್ಕೆ ಸಂಸತ್‌ ಅನುಮೋದನೆ ದೊರೆತ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಸೆಲ್ಫಿ ವಿಡಿಯೋ ಹೊಸ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ವಿಡಿಯೋಗೆ ಇನ್‌ಸ್ಟಾಗ್ರಾಮ್‌ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಖ್ಯಸ್ಥ ಅಭಿಜೀತ್ ದಿಪ್ಕೆ, "ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖದ ಚರ್ಮವೇ ಹೆಚ್ಚು ಗ್ಲೋ ಆಗುತ್ತಿದೆ" ಎಂದು ಪ್ರಧಾನಿ ಮೋದಿಯವರ ವೈಯಕ್ತಿಕ ಸೌಂದರ್ಯವನ್ನು ಲೇವಡಿ ಮಾಡಿದ್ದಾರೆ.

ಅಭಿಜೀತ್ ದಿಪ್ಕೆ ಅವರ ಈ ನಡೆ ಇದೀಗ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರೊಬ್ಬರು ದೇಶದ ಶೈಕ್ಷಣಿಕ ಭವಿಷ್ಯ ನಿರ್ಧರಿಸುವ ಪ್ರಮುಖ ಮಸೂದೆಯ ಕುರಿತು ಬೌದ್ಧಿಕ ಹಾಗೂ ವಿಷಯಾಧಾರಿತ ಚರ್ಚೆ ನಡೆಸುವ ಬದಲು, ತೀರಾ ಕೆಳಮಟ್ಟದ ಟ್ರೋಲರ್‌ನಂತೆ ವೈಯಕ್ತಿಕ ನಿಂದನೆಗೆ ಇಳಿದಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಮುಕ್ತಿ ಹಾಡಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಮತ್ತು ಕಠಿಣ ಶಿಕ್ಷೆಯಂತಹ ದೂರದೃಷ್ಟಿಯ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಪಕ್ಷಗಳು ಕೇವಲ ಕ್ಯಾಮೆರಾ ಆಂಗಲ್ ಹಾಗೂ ಪ್ರಧಾನಿಯವರ ಮುಖದ ಕಾಂತಿಯ ಬಗ್ಗೆ ಟೀಕೆ ಮಾಡುತ್ತಿರುವುದು ಅವರ ರಾಜಕೀಯ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದಾರೆ. ಸಮಾಜಕ್ಕೆ ಉಪಯುಕ್ತವಾಗುವ ಗಂಭೀರ ರಾಜಕಾರಣವನ್ನು ಬದಿಗಿಟ್ಟು, ಕಸದಂತಿರುವ ಸೋಷಿಯಲ್ ಮೀಡಿಯಾ ಟ್ರೋಲ್‌ಗಳ ಮೂಲಕ ಪ್ರಚಾರ ಗಿಟ್ಟಿಸಲು ಸಿಜೆಪಿ ಯತ್ನಿಸುತ್ತಿದೆ ಎಂದು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ