image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ರೂಪಿಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರ ರಾಜೀನಾಮೆ ಪಡೆಯದಿದ್ದರೆ ಮುಂಬರುವ ಶಾಸನಸಭೆ ಅಧಿವೇಶನವನ್ನು ನಡೆಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಅಕ್ರಮ ಹಣ ದುರುಪಯೋಗ ಪ್ರಕರಣದಲ್ಲಿ ಜೈಲಿಗೆ ಹೋಗಿ ಪ್ರಸ್ತುತ ಜಾಮೀನಿನ ಮೇಲಿರುವ ನಾಗೇಂದ್ರ ಅವರಿಗೆ ಕಾಂಗ್ರೆಸ್ ಉಡುಗೊರೆಯಾಗಿ ಮಂತ್ರಿಸ್ಥಾನ ನೀಡಿದೆ ಎಂದು ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ಸಚಿವ ಸ್ಥಾನಗಳನ್ನು ಹರಾಜಿಗೆ ಇಟ್ಟಿದೆ ಎಂದು ಆರೋಪಿಸಿದ ಅವರು, ನಾಗೇಂದ್ರ ಅವರು ಇತರರ ಹೆಸರುಗಳನ್ನು ಬಹಿರಂಗಪಡಿಸುತ್ತಾರೆಂಬ ಭಯದಿಂದ ಅಥವಾ ಹಣದ ಪ್ರಭಾವಕ್ಕೆ ಒಳಗಾಗಿ ಸಚಿವ ಸ್ಥಾನ ನೀಡಿರುವುದು ಸಾಬೀತಾಗಿದೆ ಎಂದರು. ಇದೇ ತಿಂಗಳ 13ರಿಂದ ಸದನ ಪ್ರಾರಂಭವಾಗಲಿದ್ದು, ಸಚಿವ ನಾಗೇಂದ್ರ ಅವರು ತಕ್ಷಣವೇ ರಾಜೀನಾಮೆ ನೀಡದಿದ್ದರೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.

Category
ಕರಾವಳಿ ತರಂಗಿಣಿ