ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.