image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಲೀಶಹರ್‌ನಲ್ಲಿ ಮಮತಾ ಬ್ಯಾನರ್ಜಿ ಭೇಟಿ ವೇಳೆ ಭಾರಿ ಗದ್ದಲ: ಬಿಜೆಪಿ ವಾಗ್ದಾಳಿ

ಹಲೀಶಹರ್‌ನಲ್ಲಿ ಮಮತಾ ಬ್ಯಾನರ್ಜಿ ಭೇಟಿ ವೇಳೆ ಭಾರಿ ಗದ್ದಲ: ಬಿಜೆಪಿ ವಾಗ್ದಾಳಿ

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಹಲೀಶಹರ್‌ನಲ್ಲಿ ಮೃತ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಬಿರ್ಜು ಕಿಯೋಟ್ ಅವರ ಮನೆಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರಿಗೆ ಸ್ಥಳೀಯ ನಿವಾಸಿಗಳಿಂದ ತೀವ್ರ ಪ್ರತಿಭಟನೆ ಎದುರಾಗಿದೆ. ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾತಾವರಣ ಉದ್ವಿಗ್ನಗೊಂಡಿದ್ದು, ಪ್ರತಿಭಟನಾಕಾರರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಕಾರಿನ ಮೇಲೆ ಶೂ, ಚಪ್ಪಲಿ ಹಾಗೂ ಕೆಸರೆರಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಬಂಗಾಳ ರಾಜಕೀಯದಲ್ಲಿ ಮತ್ತೊಮ್ಮೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ನಡುವೆ, ಬಿಜೆಪಿ ನಾಯಕ ಮತ್ತು ಸಿ ಎಂ ಸುವೇಂದು ಅಧಿಕಾರಿ ಈ ಭೇಟಿಯ ಕುರಿತು ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೃತರ ಕುಟುಂಬವು ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಿರಲಿಲ್ಲ ಮತ್ತು ಅವರು ಯಾವುದೇ ರಾಜಕೀಯ ಹಸ್ತಕ್ಷೇಪವನ್ನು ಬಯಸುತ್ತಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. ಕುಟುಂಬದ ಬಾಗಿಲು ಮಮತಾಗೆ ಮುಚ್ಚಲ್ಪಟ್ಟಿದ್ದು, ಕುಟುಂಬವು ಪೋಲಿಸ್ ತನಿಖೆಯನ್ನಷ್ಟೇ ನಂಬಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಈ ಭೇಟಿಯ ಕುರಿತು ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡದಿರುವುದು ಮತ್ತು ವಕೀಲರೊಂದಿಗೆ ಸ್ಥಳಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಕಟುವಾಗಿ ಟೀಕಿಸಿದ್ದಾರೆ.

Category
ಕರಾವಳಿ ತರಂಗಿಣಿ