image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪ್ರತಿ ಪಂಚಾಯಿತಿಗೆ ಕೆಪಿಎಸ್ ಶಾಲೆ: ಸಚಿವ ಎಚ್.ಸಿ. ಬಾಲಕೃಷ್ಣ

ಪ್ರತಿ ಪಂಚಾಯಿತಿಗೆ ಕೆಪಿಎಸ್ ಶಾಲೆ: ಸಚಿವ ಎಚ್.ಸಿ. ಬಾಲಕೃಷ್ಣ

ಬಾಚೇನಹಟ್ಟಿ : ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಸ್ಥಾಪಿಸಿ, ಗ್ರಾಮೀಣ ಹಾಗೂ ಹಿಂದುಳಿದ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದರು. ಬಾಚೇನಹಟ್ಟಿಯ ಕೆಪಿಎಸ್ ಶಾಲಾ ಕಟ್ಟಡ ನಿರ್ಮಾಣದ ಉದ್ದೇಶಿತ ಜಾಗವನ್ನು ಪರಿಶೀಲಿಸಿ ಅವರು ಈ ವಿಷಯ ತಿಳಿಸಿದರು.

ಪ್ರತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ₹3 ರಿಂದ ₹4 ಕೋಟಿ ಅನುದಾನ ಮಂಜೂರಾಗಿದ್ದು, ಜಾಗದ ಲಭ್ಯತೆ ಆಧರಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುವುದು. ಶಾಲೆಗೆ ಜಾಗ ಅಥವಾ ಹೆಚ್ಚುವರಿ ನೆರವು ನೀಡುವ ದಾನಿಗಳ ಹೆಸರನ್ನೇ ಶಾಲಾ ಕಟ್ಟಡಕ್ಕೆ ನಾಮಕರಣ ಮಾಡಲಾಗುವುದು. ಬಾಚೇನಹಟ್ಟಿಯಲ್ಲಿ ಪ್ರಸ್ತುತ ಸ್ಥಳ ಕಿರಿದಾಗಿದ್ದು, ದಾನಿಗಳ ಸಹಕಾರದಿಂದ ಅಗತ್ಯ ಜಾಗ ಪಡೆದು ಸುಂದರ ಶಾಲೆ ನಿರ್ಮಿಸಲಾಗುವುದು. ಶೀಘ್ರದಲ್ಲೇ ಚಕ್ರಭಾವಿ ಗ್ರಾಮಕ್ಕೂ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಖಾಸಗಿ ಶಾಲೆಗಳ ಮಾದರಿಯಲ್ಲೇ ಗ್ರಾಮೀಣ ಮಕ್ಕಳನ್ನು ಶಾಲೆಗೆ ಕರೆತರಲು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಉಚಿತ ಬಸ್ ಸೌಕರ್ಯ ಒದಗಿಸಲಾಗುವುದು. ಕ್ಷೇತ್ರದಲ್ಲಿ ಈಗಾಗಲೇ ಸುಮಾರು 10 ಕೆಪಿಎಸ್ ಶಾಲೆಗಳಿದ್ದು, ಕುದೂರಿನಲ್ಲಿ ರಾಜ್ಯಕ್ಕೆ ಮಾದರಿಯಾಗುವ ಶಾಲೆ ಆರಂಭಿಸಲಾಗಿದೆ. ಉತ್ತಮ ಶಿಕ್ಷಣ, ಆರೋಗ್ಯ ಸೇವೆ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ನೀಡುವುದೇ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ