image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಚಾಮರಾಜನಗರ ಎನ್‌ಕೌಂಟರ್‌: ರಾಜೀನಾಮೆಗೆ ಸಿದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ

ಚಾಮರಾಜನಗರ ಎನ್‌ಕೌಂಟರ್‌: ರಾಜೀನಾಮೆಗೆ ಸಿದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದಲ್ಲಿ ಮೂವರು ಮೃತಪಟ್ಟಿರುವ ಘಟನೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ತಾವು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ನಿಜವಾಗಿಯೂ ಭಾವಿಸಿದರೆ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಒದಗಿಸಬೇಕು ಹಾಗೂ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸದನದಲ್ಲಿ ತೀವ್ರವಾಗಿ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಮೃತಪಟ್ಟವರು ರೈತರಲ್ಲ, ಬೇಟೆಗಾರರು ಎಂಬುದು ತನಿಖೆಯಲ್ಲಿ ದೃಢಪಟ್ಟರೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದ್ದು, ಇನ್ನು ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಪ್ರಸ್ತುತ ಅಧಿವೇಶನ ಇನ್ನು ಎರಡು ವಾರಗಳ ಕಾಲ ನಡೆಯಲಿದ್ದು, ತನಿಖಾ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು, ಅದರಿಂದ ತೃಪ್ತಿಯಾಗದಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ತಪ್ಪು ಎಸಗಿರುವುದು ತನಿಖೆಯಲ್ಲಿ ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದರೂ, ಪ್ರತಿಪಕ್ಷ ಸದಸ್ಯರು ನ್ಯಾಯಾಂಗ ತನಿಖೆಗೆ ಪಟ್ಟು ಹಿಡಿದರು. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Category
ಕರಾವಳಿ ತರಂಗಿಣಿ