image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೆಪಿಎಸ್‍ಸಿ ಅಧ್ಯಕ್ಷ ಹುದ್ದೆಗೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ: ಹೈಕೋರ್ಟ್ ಆದೇಶ

ಕೆಪಿಎಸ್‍ಸಿ ಅಧ್ಯಕ್ಷ ಹುದ್ದೆಗೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ: ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು 7 ದಿನಗಳಲ್ಲಿ ಮರುನೇಮಕ ಮಾಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 10ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ರದ್ದುಗೊಳಿಸಿದೆ. ಸಾಂವಿಧಾನಿಕ ನಿಯಮಾವಳಿಗಳಂತೆ ರಾಜ್ಯಪಾಲರು ಸಚಿವ ಸಂಪುಟದ ಸ್ಪಷ್ಟ ಸಲಹೆ ಹಾಗೂ ಶಿಫಾರಸಿನ ಮೇಲಷ್ಟೇ ಇಂತಹ ನಿರ್ಧಾರ ಕೈಗೊಳ್ಳಬೇಕಿತ್ತು; ಆದರೆ ಸಂಪುಟದ ಪೂರ್ವ ಅನುಮೋದನೆ ಪಡೆಯದೆ ಈ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮರುನೇಮಕ ಆದೇಶ ನೀಡಿದರೂ, ಸಾಹುಕಾರ್ ಅವರು ತಮ್ಮ ಪುತ್ರಿಯರ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಅಥವಾ ಪ್ರಭಾವ ಬೀರಬಾರದು ಎಂದು ಕೋರ್ಟ್ ನಿರ್ಬಂಧ ವಿಧಿಸಿದೆ. ಅಲ್ಲದೆ, ಅವರ ವಿರುದ್ಧ ಇರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ಯಾವುದೇ ತಡೆಯಾಜ್ಞೆ ನೀಡಿಲ್ಲ ಹಾಗೂ ಕಾನೂನುಬದ್ಧವಾಗಿ ಮುಂದಿನ ಕ್ರಮ ಜರುಗಿಸಲು ಮುಕ್ತ ಅವಕಾಶ ನೀಡಲಾಗಿದೆ.

Category
ಕರಾವಳಿ ತರಂಗಿಣಿ