image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೈಗಾರಿಕಾ ಅಭಿವೃದ್ಧಿಗೆ 5 ನಗರ ಗುರುತಿಸಲು ಅಧಿಕಾರಿಗಳಿಗೆ ಸೂಚನೆ

ಕೈಗಾರಿಕಾ ಅಭಿವೃದ್ಧಿಗೆ 5 ನಗರ ಗುರುತಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಐದು ಹೊಸ ನಗರಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೂಡಿಕೆದಾರರಿಗೆ ವಿಶೇಷ ರಿಯಾಯಿತಿ ನೀಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ವಿಮಾನ ನಿಲ್ದಾಣ ಸೇರಿದಂತೆ ಉತ್ತಮ ಮೂಲಸೌಕರ್ಯ ಹೊಂದಿರುವ ನಗರಗಳನ್ನು ಆಯ್ಕೆ ಮಾಡುವಂತೆ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ದೇಶಿಸಲಾಯಿತು.

ಉದ್ಯಮಗಳ ಸ್ಥಾಪನೆಗೆ ಏಕಗವಾಕ್ಷಿ ಅನುಮೋದನೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ನಿಗದಿತ ಕಾಲಮಿತಿಯೊಳಗೆ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಪ್ರಸ್ತುತ ಈ ವ್ಯವಸ್ಥೆಯಲ್ಲಿ 22 ಇಲಾಖೆಗಳು ಹಾಗೂ 119 ಸೇವೆಗಳನ್ನು ಸಂಯೋಜಿಸಲಾಗಿದ್ದು, ಡಿಜಿಟಲ್ ಮತ್ತು ಸಮಯೋಚಿತ ಅನುಮೋದನೆಗೆ ಆದ್ಯತೆ ನೀಡಲಾಗಿದೆ. ನೀತಿ ಆಯೋಗದ ಹೂಡಿಕೆದಾರ ಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ ప్రస్తుతం 9ನೇ ಸ್ಥಾನದಲ್ಲಿದ್ದು, ಈ ಶ್ರೇಯಾಂಕವನ್ನು ಉತ್ತಮಪಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದೇ ವೇಳೆ ಆಂಧ್ರಪ್ರದೇಶ, ತಮಿಳುನಾಡು, ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಂತಹ ರಾಜ್ಯಗಳು ಹೂಡಿಕೆ ಆಕರ್ಷಿಸಲು ಕೈಗೊಳ್ಳುತ್ತಿರುವ ಕ್ರಮಗಳು ಮತ್ತು ಹೂಡಿಕೆದಾರರು ಬಯಸುವ ಸುಧಾರಣೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

Category
ಕರಾವಳಿ ತರಂಗಿಣಿ