image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಜನರ ಮೇಲಿನ ಅನ್ಯಾಯದ ವಿರುದ್ಧವೇ 'ಬಳ್ಳಾರಿ ಚಲೋ' ಪಾದಯಾತ್ರೆ: ಡಾ. ಸಿ.ಟಿ. ರವಿ

ಜನರ ಮೇಲಿನ ಅನ್ಯಾಯದ ವಿರುದ್ಧವೇ 'ಬಳ್ಳಾರಿ ಚಲೋ' ಪಾದಯಾತ್ರೆ: ಡಾ. ಸಿ.ಟಿ. ರವಿ

ಲಿಂಗಸುಗೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಜನರ ಮೇಲಿನ ಅನ್ಯಾಯದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ 'ಬಳ್ಳಾರಿ ಚಲೋ' ಪಾದಯಾತ್ರೆ ಕೇವಲ ಮಾಜಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಸೀಮಿತವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ.

ಲಿಂಗಸುಗೂರಿನಲ್ಲಿ ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮದ ಹಣ ಖಜಾನೆಗೆ ಮರಳಿಲ್ಲ ಹಾಗೂ ಗೃಹಲಕ್ಷ್ಮಿ ಯೋಜನೆಯ ₹5,000 ಕೋಟಿ ಹಣದ ಲೆಕ್ಕವನ್ನು ಸರ್ಕಾರ ನೀಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು. ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಕಳೆದ 5 ತಿಂಗಳಿಂದ ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ಪಿಂಚಣಿ ಸಿಗದಿರುವುದು ಹಾಗೂ ಎಸ್ಸಿ/ಎಸ್ಟಿ ಮೀಸಲಾತಿ ಪ್ರಮಾಣವನ್ನು ಸರ್ಕಾರ ಕಡಿಮೆ ಮಾಡಿರುವುದನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಸೂಕ್ತ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದೆ ಕೇವಲ ವೀಕ್ಷಣೆಗೆ ಸೀಮಿತವಾಗಿದೆ ಎಂದು ಟೀಕಿಸಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿ ಸರ್ಕಾರದ ಪ್ರತಿಯೊಂದು ಜನವಿರೋಧಿ ನೀತಿಯ ವಿರುದ್ಧ ಜನರ ಧ್ವನಿಯಾಗಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.

Category
ಕರಾವಳಿ ತರಂಗಿಣಿ