image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೂಗ್ತಿಹಳ್ಳಿಯಲ್ಲಿ ನೂತನ ಆಟೋ ನಿಲ್ದಾಣ ಲೋಕಾರ್ಪಣೆ: ಡಾ. ರವಿ ಸಿ.ಟಿ. ಚಾಲನೆ

ಮೂಗ್ತಿಹಳ್ಳಿಯಲ್ಲಿ ನೂತನ ಆಟೋ ನಿಲ್ದಾಣ ಲೋಕಾರ್ಪಣೆ: ಡಾ. ರವಿ ಸಿ.ಟಿ. ಚಾಲನೆ

ಮೂಗ್ತಿಹಳ್ಳಿ: ಮೂಗ್ತಿಹಳ್ಳಿ ಗ್ರಾಮದ ಆಟೋ ಚಾಲಕರು ಹಾಗೂ ಮಾಲೀಕರ ಬಹುದಿನದ ಬೇಡಿಕೆಯಾಗಿದ್ದ ಆಟೋ ನಿಲ್ದಾಣವು ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸುಮಾರು 3.5 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡು, ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ.

ಆಟೋ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ. ಟಿ., ಗ್ರಾಮಸ್ಥರು ಹಲವು ವರ್ಷಗಳಿಂದ ಈ ನಿಲ್ದಾಣದ ಅಗತ್ಯವನ್ನು ತಮ್ಮ ಗಮನಕ್ಕೆ ತಂದಿದ್ದರು. ಅದರಂತೆ ಪಂಚಾಯಿತಿಗೆ ಅನುದಾನ ಒದಗಿಸಿ ಇಂದು ಇದನ್ನು ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗದ ವಾಹನ ಸಂಚಾರದಿಂದ ಆಗುತ್ತಿರುವ ಅಪಘಾತಗಳ ಬಗ್ಗೆ ಹಾಗೂ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಅವರು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೆ, ಶಿರಗುಂದದಿಂದ ಮೂಡಿಗೆರೆವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಭೂಸ್ವಾಧೀನ ಹಾಗೂ ಸ್ಥಳೀಯರಿಗೆ ನೀಡಬೇಕಾದ ಪರಿಹಾರದ ಬಾಕಿ ಕುರಿತು ಮಾಹಿತಿ ಪಡೆದು ಸೂಕ್ತ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಸ್‌.ಟಿ ಚಂದ್ರೇಗೌಡ, ಹಿರಿಯ ಮುಖಂಡರಾದ ಪದ್ಮರಾಜ್ ಜೈನ್, ಪದ್ಮಾನಂದ ಜೈನ್, ರಾಮಸ್ವಾಮಿ, ಮಧು ಮೂಗ್ತಿಹಳ್ಳಿ ಸೇರಿದಂತೆ ಆಟೋ ಚಾಲಕರ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ