image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ: ಆನ್​ಲೈನ್​ನಲ್ಲೂ​ ಬುಕ್ಕಿಂಗ್​ ವ್ಯವಸ್ಥೆ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ: ಆನ್​ಲೈನ್​ನಲ್ಲೂ​ ಬುಕ್ಕಿಂಗ್​ ವ್ಯವಸ್ಥೆ

ಹಾಸನ: ಇಂದು ಮದ್ಯಾಹ್ನ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗುತ್ತಿದ್ದು,  ನವೆಂಬರ್ 3ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ದಸರಾ ಮುಗಿದ 14 ದಿನಗಳ ಬಳಿಕ,ಅಶ್ವಯುಜ ಮಾಸದ ಮೊದಲ ಗುರುವಾರ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲನ್ನು ತೆರೆಯುವುದು ರೂಡಿ. ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆ ಹಾಸನಾಂಬೆ ದೇಗುಲದಲ್ಲಿ ದೇವಿ ದರ್ಶನ ಸಿಗುವುದು ವರ್ಷಕ್ಕೆ ಒಮ್ಮೆ ಮಾತ್ರ.  ಈ ವರ್ಷ ಅಕ್ಟೋಬರ್ 24ರ ಮಧ್ಯಾಹ್ನ ದೇಗುಲದ ಬಾಗಿಲು ತೆರೆದರೆ, ನವೆಂಬರ್ 3ರಂದು ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತದೆ. ಒಟ್ಟು 11 ದಿನಗಳ ಕಾಲ ಬಾಗಿಲನ್ನು ತೆರೆದರೂ, ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಹೀಗಾಗಿ, 9 ದಿನಗಳು ಮಾತ್ರ ಈ ಬಾರಿ ದರ್ಶನಕ್ಕೆ ಅವಕಾಶವಿದೆ.  ಕಳೆದ ಬಾರಿ 14 ಲಕ್ಷ ಮಂದಿ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ವಿಶೇಷ ತಯಾರಿ ನಡೆಸಿದೆ.

ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು, ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್​ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಟೆಂಟ್ ಮತ್ತು ಪ್ರಸಾದದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.  ಕಳೆದ ವರ್ಷ ಆಗುತ್ತಿದ್ದ ಕೆಲವು ಲೋಪದೋಷಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದೆ. ದಿನದ 24 ಗಂಟೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಈ ವರ್ಷ ಮೊದಲ ದಿನ ಬಾಗಿಲು ತೆರೆದ ನಂತರ ದೇಗುಲ ಶುದ್ಧಿ ಮಾಡಲಾಗುತ್ತೆ. ಮರುದಿನ ಬೆಳಗ್ಗೆಯಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರಲಿದೆ. ದೇವಿಗೆ ಒಟ್ಟು ನಾಲ್ಕು ಬಾರಿ ಬೇರೆ ಬೇರೆ ರೀತಿಯ ವಿಶಿಷ್ಟ ಅಲಂಕಾರ, ವಸ್ತ್ರಧಾರಣೆ ಮಾಡಲಾಗುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತುಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರಲಿದೆ. ಅಷ್ಟೇ ಅಲ್ಲದೆ ಈ ಬಾರಿ ಹಾಸನಾಂಬೆ ಆ್ಯಪ್ ಮೂಲಕ ದರ್ಶನಕ್ಕೆ ಆನ್​ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

Category
ಕರಾವಳಿ ತರಂಗಿಣಿ