image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಕೊಪ್ಪಳ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಇಂದು (ಸೆಪ್ಟೆಂಬರ್ 28) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದ ನಿಯೋಗ ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಆಹ್ವಾನ ಪತ್ರಿಕೆ ಹಸ್ತಾಂತರಿಸಿತು. ಸರ್ಕಾರದ ಈ ಆಹ್ವಾನವನ್ನು ಶ್ರೀಗಳು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದು, ಇದರೊಂದಿಗೆ ದಸರಾ ಉದ್ಘಾಟನೆಗೆ ಸಂಬಂಧಿಸಿದ ಎಲ್ಲಾ ಗೊಂದಲ ಹಾಗೂ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆಬಿದ್ದಿದೆ.

ದಸರಾ ಸಮಿತಿಯು ಉದ್ಘಾಟಕರನ್ನು ಖುದ್ದು ಭೇಟಿ ಮಾಡಿ ಆಹ್ವಾನಿಸುವ ಸಂಪ್ರದಾಯದಂತೆ ಈ ಕಾರ್ಯಕ್ರಮ ನಡೆಯಿತು. ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು. ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ಅಕ್ಟೋಬರ್ 11ರಂದು ವಿದ್ಯುಕ್ತವಾಗಿ ಚಾಲನೆ ದೊರೆಯಲಿದ್ದು, ಅಕ್ಟೋಬರ್ 21ರಂದು ವೈಭವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಜರುಗಲಿದೆ.

Category
ಕರಾವಳಿ ತರಂಗಿಣಿ