image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

₹9.80 ಕೋಟಿ ವೆಚ್ಚದ ಅರಣ್ಯ ಭವನ ಕಾಮಗಾರಿ ಪೂರ್ಣದತ್ತ

₹9.80 ಕೋಟಿ ವೆಚ್ಚದ ಅರಣ್ಯ ಭವನ ಕಾಮಗಾರಿ ಪೂರ್ಣದತ್ತ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ₹9.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ ಅಂತಿಮ ಹಂತದ ಸಣ್ಣಪುಟ್ಟ ತಿದ್ದುಪಡಿಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿಕ್ಕಮಗಳೂರಿನ ಅರಣ್ಯ ಭವನ ಸಂಕೀರ್ಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಬೇರೆ ಬೇರೆ ಸ್ಥಳಗಳಲ್ಲಿದ್ದ ಅರಣ್ಯ ಇಲಾಖೆಯ ವಿವಿಧ ವಿಭಾಗಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿತ್ತು ಎಂದರು. ಈ ಕಾಮಗಾರಿಗೆ 2022ರ ಅಕ್ಟೋಬರ್‌ನಲ್ಲಿ ತಾಂತ್ರಿಕ ಅನುಮೋದನೆ ದೊರೆತು, 2023ರ ಫೆಬ್ರವರಿಯಲ್ಲಿ ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಲಾಗಿತ್ತು. ತಾವು ಶಾಸಕರಾಗಿದ್ದ ಅವಧಿಯಲ್ಲಿ ಚಿಕ್ಕಮಗಳೂರಿನ ಭವಿಷ್ಯದ ಅಭಿವೃದ್ಧಿ ಹಾಗೂ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗೆ ಅನುದಾನ ಮಂಜೂರು ಮಾಡಿಸಲಾಗಿತ್ತು ಎಂದು ಅವರು ತಿಳಿಸಿದರು.

ಕಟ್ಟಡದ ಹೊರಾಂಗಣ ವಿನ್ಯಾಸ ಉತ್ತಮವಾಗಿ ಬಂದಿದ್ದು, ಒಳಾಂಗಣದಲ್ಲೂ ಅಗತ್ಯವಿರುವ ಸಣ್ಣಪುಟ್ಟ ಸರಿಪಡಿಸುವಿಕೆಗಳನ್ನು ಸಿಬ್ಬಂದಿಯಿಂದ ಮಾಹಿತಿ ಪಡೆದು ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ. ಜತೆಗೆ, ಅರಣ್ಯ ಭವನದ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆಯೇ ಹಸಿರು ವಾತಾವರಣದ ಅನುಭವವಾಗುವಂತೆ ಕಟ್ಟಡದ ಸುತ್ತಮುತ್ತ ಸೂಕ್ತ ರೀತಿಯಲ್ಲಿ ಗಿಡ-ಮರಗಳನ್ನು ಬೆಳೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Category
ಕರಾವಳಿ ತರಂಗಿಣಿ