image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಶಶಿಲ್ ಜಿ. ನಮೋಶಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ: ಡಾ. ರವಿ ಸಿ.ಟಿ.

ಶಶಿಲ್ ಜಿ. ನಮೋಶಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ: ಡಾ. ರವಿ ಸಿ.ಟಿ.

ಕಲಬುರಗಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ, ಹಳೆಯ ಪಿಂಚಣಿ ಯೋಜನೆಗೆ ವರ್ಗಾವಣೆ ಮತ್ತು ಶಿಕ್ಷಕರ ಪರ ಧ್ವನಿ ಎತ್ತಿರುವ ಎನ್‌ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರನ್ನು ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಮನವಿ ಮಾಡಿದ್ದಾರೆ.

ಕಲಬುರಗಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ನೀತಿ ರಾಷ್ಟ್ರ ಮೊದಲು ಹಾಗೂ ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್ ತತ್ವದಡಿಯಾಗಿದೆ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಗರಣ ಮತ್ತು ಬೆಲೆ ಏರಿಕೆಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದ ಅವರು, ರೈತರ ಬಾಕಿ ಹಣ, ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರ ಸಂಬಳ ಮತ್ತು ಪಿಂಚಣಿಗಳು ಸ್ಥಗಿತಗೊಂಡಿದ್ದು ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚಿದೆ ಎಂದು ಆರೋಪಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಬಸವರಾಜ ಮತ್ತಿಮಡ್, ಅವಿನಾಶ್ ಜಾಧವ್, ಬಿಜೆಪಿ ಮುಖಂಡ ಅಶೋಕ್ ಬಗಲಿ, ಬಿ.ಜಿ. ಪಾಟೀಲ್, ಅಭ್ಯರ್ಥಿ ಶಶಿಲ್ ಜಿ. ನಮೋಶಿ, ಉಮೇಶ್ ಜಾಧವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ