image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹ: ಡಾ. ರವಿ ಸಿ.ಟಿ

ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹ: ಡಾ. ರವಿ ಸಿ.ಟಿ

ಚಿಕ್ಕಮಗಳೂರು: ಆರೋಗ್ಯ ರಕ್ಷಣೆಯಲ್ಲಿ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಠ ಗೌರವಧನವನ್ನು ₹10 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನ ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಸರ್ಕಾರ ನೀಡಿದ್ದ ಭರವಸೆಯಂತೆ ಮಾಸಿಕ ₹10 ಸಾವಿರ ನಿಶ್ಚಿತ ಗೌರವಧನ ಜಾರಿಗೆ ಬಂದಿಲ್ಲ ಎಂದು ಆರೋಪಿಸಿದರು. ಗೌರವಧನ ಮತ್ತು ಪ್ರೋತ್ಸಾಹಧನ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ಸರಿಪಡಿಸಲು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.

ಕಾರ್ಯಕರ್ತೆಯರಿಗೆ ಮೊಬೈಲ್ ಮತ್ತು ಆ್ಯಪ್ ನಿರ್ವಹಣೆಗೆ ತರಬೇತಿ, ಆರೋಗ್ಯ ಕಾರ್ಡ್, ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುವವರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಹಾಗೂ ವಿಶ್ರಾಂತಿ ಕೊಠಡಿಗಳನ್ನು ಕಲ್ಪಿಸುವ ಅಗತ್ಯವಿದ್ದು, ಈ ಕುರಿತು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ನಿವೃತ್ತಿಯ ನಂತರದ ಆರ್ಥಿಕ ಭದ್ರತೆ ಹಾಗೂ ಡಿ.ಸಿ.ಸಿ. ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಕಲ್ಪಿಸುವ ಸಾಧ್ಯತೆಗಳನ್ನೂ ಪರಿಶೀಲಿಸುವುದಾಗಿ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತರಾದ ಹಿರಿಯ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಮುಖರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ