image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದುರಂತಗಳ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತರಿಗೆ ಪರಿಹಾರ ನೀಡಿ: ಡಾ. ರವಿ ಸಿ.ಟಿ ಆಗ್ರಹ

ದುರಂತಗಳ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತರಿಗೆ ಪರಿಹಾರ ನೀಡಿ: ಡಾ. ರವಿ ಸಿ.ಟಿ ಆಗ್ರಹ

ಚಿಕ್ಕಮಗಳೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಂಭವಿಸಿದ ಅಪಘಾತ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕಾಲ್ತುಳಿತದಿಂದ ಸಂಭವಿಸಿದ ದುರಂತಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಮತ್ತು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೀದಿ ಸಂಘರ್ಷದಿಂದ ಸರ್ಕಾರಗಳನ್ನು ಕೆಳಗಿಳಿಸಲು ಸಾಧ್ಯವಿಲ್ಲ, ಬದಲಿಗೆ ಜನರ ವಿಶ್ವಾಸ ಗೆಲ್ಲುವ ಮೂಲಕವೇ ಅಧಿಕಾರ ಪಡೆಯಬೇಕು ಎಂದು ತಿಳಿಸಿದರು. ಇದೇ ವೇಳೆ, ದೇಶದಲ್ಲಿ ಮಾದಕ ವಸ್ತುಗಳ ಪೂರೈಕೆ ಹಾಗೂ ಭಯೋತ್ಪಾದಕ ಸಂಘಟನೆಗಳ ನಂಟು ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದ ಅವರು, ಭಯೋತ್ಪಾದಕರಿಗೆ ಬೆಂಬಲ ನೀಡುವವರ ವಿರುದ್ಧ ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Category
ಕರಾವಳಿ ತರಂಗಿಣಿ