image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮಾಲ್ ಆಫ್ ಏಷ್ಯಾದಲ್ಲಿ ಆಹಾರ ತಪಾಸಣಾ ರ‍್ಯಾಪಿಡ್ ಟೆಸ್ಟಿಂಗ್​ ಕಿಟ್ಸ್​ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಚಾಲನೆ

ಮಾಲ್ ಆಫ್ ಏಷ್ಯಾದಲ್ಲಿ ಆಹಾರ ತಪಾಸಣಾ ರ‍್ಯಾಪಿಡ್ ಟೆಸ್ಟಿಂಗ್​ ಕಿಟ್ಸ್​ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಚಾಲನೆ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರಕ್ಕಾಗಿ ಇನ್ಮು ಮುಂದೆ ಸಾರ್ವಜನಿಕರೇ ಖುದ್ದು ಫುಡ್ ಕೋರ್ಟ್​ಗಳಲ್ಲಿ ಆಹಾರ ತಪಾಸಣೆ ಮಾಡಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್ಸ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಬಳಿಕ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್​ಗೆ ಮುಂದಾಗುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷಿಸಿಕೊಳ್ಳಬಹುದು. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್​ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಮಾಲ್‍ಗಳಲ್ಲಿ ಪ್ರತಿದಿನ ಬಳಸುವ ಆಹಾರ ಪದಾರ್ಥಗಳಾದ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆ, ಟೀ ಪುಡಿ, ಉಪ್ಪು, ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಪನೀರ್, ಬೆಣ್ಣೆ, ತರಕಾರಿಗಳು, ಧನಿಯಾ ಪುಡಿ, ಕುಡಿಯುವ ನೀರು ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ತ್ವರಿತ ಪರೀಕ್ಷೆಗಳಿಂದ ಖಚಿತಪಡಿಸಿಕೊಳ್ಳಬಹುದು ಎಂದರು.

Category
ಕರಾವಳಿ ತರಂಗಿಣಿ