image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಳಸಾಪುರದ ಯುವಕರು

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಳಸಾಪುರದ ಯುವಕರು

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದ ಹತ್ತಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ದೇಶಾಭಿಮಾನ ಹಾಗೂ ಬಿಜೆಪಿಯ ರಾಷ್ಟ್ರೀಯ ವಿಚಾರಧಾರೆಗಳಿಂದ ಪ್ರೇರಿತರಾಗಿ ಬುಧವಾರ ಡಾ. ಸಿ.ಟಿ. ರವಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಮಲ ಪಡೆ ಸೇರಿದರು. ಕಿರಣ್, ದೇವರಾಜ್ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ಪವನ್, ಚಂದನ್, ಉಮೇಶ್ ಕೆ.ಎಂ., ಜೀವನ್, ಸುನಿಲ್, ಪ್ರೀತಮ್ ಸೇರಿದಂತೆ ಹಲವು ಯುವಕರು ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ನಾಯಕ ಡಾ. ಸಿ.ಟಿ. ರವಿ ಅವರು ಯುವಕರಿಗೆ ಪಕ್ಷದ ಬಾವುಟ ನೀಡಿ ಅಧಿಕೃತವಾಗಿ ಬರಮಾಡಿಕೊಂಡರು.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ರಾಷ್ಟ್ರೀಯ ವಿಚಾರಗಳ ಬಗ್ಗೆ ಪಕ್ಷ ಹೊಂದಿರುವ ನಿಲುವುಗಳಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಯುವಕರು ತಿಳಿಸಿದ್ದಾರೆ. ಬಿಜೆಪಿಯ ಸಿದ್ಧಾಂತ ಹಾಗೂ ದೇಶದ ಹಿತಾಸಕ್ತಿಗೆ ನೀಡುವ ಆದ್ಯತೆಯನ್ನು ಮೆಚ್ಚಿ ಬಿಜೆಪಿ ಸೇರಿರುವುದಾಗಿ ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ. ರವಿ ಅವರು, ಯುವಕರೇ ದೇಶದ ಭವಿಷ್ಯದ ಶಕ್ತಿ ಎಂದರು. ರಾಷ್ಟ್ರದ ಅಭಿವೃದ್ಧಿ, ಸಂಸ್ಕೃತಿ ಮತ್ತು ರಾಷ್ಟ್ರೀಯ ವಿಚಾರಧಾರೆಗಳಿಗೆ ಬದ್ಧರಾಗಿರುವ ಯುವ ಸಮೂಹವನ್ನು ಬಿಜೆಪಿ ಸದಾ ಆದರದಿಂದ ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.

Category
ಕರಾವಳಿ ತರಂಗಿಣಿ