image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದೇವಿರಮ್ಮನ ಬೆಟ್ಟದಲ್ಲಿ ಹಗ್ಗ ತುಂಡಾಗಿ 40ಕ್ಕೂ ಹೆಚ್ಚು ಭಕ್ತರಿಗೆ ಗಾಯ: ಉಚಿತ ಚಿಕಿತ್ಸೆಗೆ ಡಾ.ಸಿ.ಟಿ ರವಿ ಸೂಚನೆ

ದೇವಿರಮ್ಮನ ಬೆಟ್ಟದಲ್ಲಿ ಹಗ್ಗ ತುಂಡಾಗಿ 40ಕ್ಕೂ ಹೆಚ್ಚು ಭಕ್ತರಿಗೆ ಗಾಯ: ಉಚಿತ ಚಿಕಿತ್ಸೆಗೆ ಡಾ.ಸಿ.ಟಿ ರವಿ ಸೂಚನೆ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಶ್ರೀ ದೇವಿರಮ್ಮನ ಬೆಟ್ಟದಲ್ಲಿ ದೇವಿಯ ದರ್ಶನಕ್ಕೆ ಆಗಮಿಸಿದ್ದ ಭಕ್ತರ ರಕ್ಷಣೆಗೆ ಕಟ್ಟಲಾಗಿದ್ದ ಹಗ್ಗ ತುಂಡಾಗಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 8 ಮಂದಿಯನ್ನು ಒಳರೋಗಿಗಳಾಗಿ ಭರ್ತಿ ಮಾಡಿಕೊಳ್ಳಲಾಗಿದೆ ಹಾಗೂ ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.

ವಿಷಯ ತಿಳಿದ ತಕ್ಷಣ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ ರವಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಕ್ಷೇಮ ವಿಚಾರಿಸಿದರು. ಬಾಧಿತರ ಕುಟುಂಬಸ್ಥರೊಂದಿಗೆ ಮಾತನಾಡಿ ಧೈರ್ಯ ತುಂಬಿದ ಅವರು, ಗಾಯಗೊಂಡ ಎಲ್ಲ ಭಕ್ತರಿಗೂ ಉಚಿತ ಹಾಗೂ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇದೇ ವೇಳೆ, ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರ ಸಾವಿಗೂ ಈ ಅವಘಡಕ್ಕೂ ಸಂಬಂಧವಿಲ್ಲ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು. ಬೆಟ್ಟದ ಕಡಿದಾದ ಭೌಗೋಳಿಕ ಸ್ವರೂಪದಿಂದ ಅನಿರೀಕ್ಷಿತ ಘಟನೆ ನಡೆದಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಮನವಿ ಮಾಡಿದರು.

Category
ಕರಾವಳಿ ತರಂಗಿಣಿ