image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಗೌರವ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಗೌರವ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ದಿನಾಚರಣೆ-2026ರ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಗೌರವ ನೀಡಿ ಸನ್ಮಾನಿಸಲಾಯಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಂಸ್ಥೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರು ಈ ಗೌರವವನ್ನು ಸ್ವೀಕರಿಸಿದರು. ಸಚಿವ ಯು.ಟಿ. ಖಾದರ್ ಅವರು ಸುರೇಂದ್ರ ಕುಮಾರ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಭಾರತದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ನೀಡುತ್ತಿರುವ ಗುಣಮಟ್ಟದ ಶಿಕ್ಷಣ, ಸಮಾನ ಅವಕಾಶ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಸರ್ಕಾರ ಈ ಮನ್ನಣೆ ನೀಡಿದೆ.

Category
ಕರಾವಳಿ ತರಂಗಿಣಿ