image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ: ಸಚಿವ ಸಂತೋಷ್ ಲಾಡ್ ಭೇಟಿ, ಪರಿಶೀಲನೆ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ: ಸಚಿವ ಸಂತೋಷ್ ಲಾಡ್ ಭೇಟಿ, ಪರಿಶೀಲನೆ

ನವಲಗುಂದ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಇಂದು ನವಲಗುಂದ ತಾಲೂಕಿನಲ್ಲಿ ನಡೆಯುತ್ತಿರುವ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಕಾಮಗಾರಿ ಸ್ಥಳದಲ್ಲಿ ಅಧಿಕಾರಿಗಳಿಂದ ಯೋಜನೆಯ ಪ್ರಗತಿಯ ಕುರಿತು ಸವಿವರ ಮಾಹಿತಿ ಪಡೆದುಕೊಂಡ ಸಚಿವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ತಾಕೀತು ಮಾಡಿದರು. ಅಲ್ಲದೆ, ನಿಗದಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ಪ್ರವಾಹದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಯೋಜನೆಯನ್ನು ಅತ್ಯಂತ ಜವಾಬ್ದಾರಿಯಿಂದ ಅನುಷ್ಠಾನಗೊಳಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಚಿವರ ಈ ಭೇಟಿ ಹಾಗೂ ಪರಿಶೀಲನೆಯ ಸಂದರ್ಭದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರೆಡ್ಡಿ ಅವರು ಉಪಸ್ಥಿತರಿದ್ದರು. ಇದೇ ವೇಳೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ಕಾಮಗಾರಿಯ ಪ್ರಗತಿಯ ವಿವರಗಳನ್ನು ಸಚಿವರ ಗಮನಕ್ಕೆ ತಂದರು.

 

Category
ಕರಾವಳಿ ತರಂಗಿಣಿ