image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಆದಿಚುಂಚನಗಿರಿ ಪಿಯು ಕಾಲೇಜಿಗೆ ಸತತ ಎರಡನೇ ಬಾರಿ ಸಮಗ್ರ ಪ್ರಶಸ್ತಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಆದಿಚುಂಚನಗಿರಿ ಪಿಯು ಕಾಲೇಜಿಗೆ ಸತತ ಎರಡನೇ ಬಾರಿ ಸಮಗ್ರ ಪ್ರಶಸ್ತಿ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ, ಶಿವಮೊಗ್ಗ ನಗರದ ಮಠದ ಆವರಣದಲ್ಲಿರುವ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭರ್ಜರಿ ಪ್ರದರ್ಶನ ನೀಡಿ ಸತತ ಎರಡನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ ಇಂತಿದೆ: ರಸಪ್ರಶ್ನೆ ಸ್ಪರ್ಧೆಯ ಪ್ರಥಮ ಪಿಯುಸಿ ವಿಭಾಗದಲ್ಲಿ ಕು. ಸಾನ್ವಿ ಭಾರದ್ವಾಜ್ ಮತ್ತು ಚಿ. ಕೆವಿನ್ ಫ್ರಾನ್ಸಿಸ್ ಡಿಸೋಜ ಪ್ರಥಮ ಸ್ಥಾನ ಪಡೆದರೆ, ದ್ವಿತೀಯ ಪಿಯುಸಿ ವಿಭಾಗದಲ್ಲಿ ಕು. ಪಾವನ ಅರವಿಂದ್ ಮತ್ತು ಚಿ. ಮೊಹಮ್ಮದ್ ರಾಹಿಲ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಕು. ಬಿ.ಬಿ. ಸೂಫಿಯಾ (ಪ್ರಥಮ ಪಿಯುಸಿ) ಪ್ರಥಮ ಸ್ಥಾನ ಪಡೆದಿದ್ದು, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಚಿ. ತರುಣ್ ಡಿ. (ದ್ವಿತೀಯ ಪಿಯುಸಿ) ದ್ವಿತೀಯ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಭಾಗದಿಂದ ಕು. ತಿಷಾ ರಾಜ್‌ಪುರೋಹಿತ್ ಹಾಗೂ ದ್ವಿತೀಯ ಪಿಯುಸಿ ವಿಭಾಗದಿಂದ ಕು. ಶ್ರೀವರ್ಷಿಣಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಕು. ನಿಸರ್ಗ (ಪ್ರಥಮ ಪಿಯುಸಿ) ಮತ್ತು ಕು. ನಂದಿನಿ (ದ್ವಿತೀಯ ಪಿಯುಸಿ) ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜಾನಪದ ಗೀತೆ ಸ್ಪರ್ಧೆಯಲ್ಲಿ ಕು. ಚಂದನ ಕೆ.ಸಿ. (ಪ್ರಥಮ ಪಿಯುಸಿ) ಪ್ರಥಮ ಸ್ಥಾನ, ಚಿತ್ರಕಲೆ ಸ್ಪರ್ಧೆಯಲ್ಲಿ ಚಿ. ಪ್ರಜ್ವಲ್ ಹೆಚ್. (ದ್ವಿತೀಯ ಪಿಯುಸಿ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಚಿ. ಹೇಮಂತ್ ಜಿ. (ಪ್ರಥಮ ಪಿಯುಸಿ) ಪ್ರಥಮ ಸ್ಥಾನ ಪಡೆದರೆ, ಜಾನಪದ ನೃತ್ಯ ಸ್ಪರ್ಧೆಯಲ್ಲಿ ಕು. ತನ್ಮಯಿ ಯು. (ಪ್ರಥಮ ಪಿಯುಸಿ) ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

 

Category
ಕರಾವಳಿ ತರಂಗಿಣಿ