image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನಿರುದ್ಯೋಗಿಗಳಿಗೆ ಉಚಿತ ಅಣಬೆ ಬೇಸಾಯ ತರಬೇತಿ

ನಿರುದ್ಯೋಗಿಗಳಿಗೆ ಉಚಿತ ಅಣಬೆ ಬೇಸಾಯ ತರಬೇತಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ (RSETI) ವತಿಯಿಂದ, ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗಾಗಿ ಡಿಸೆಂಬರ್ 7, 2026 ರಿಂದ 10 ದಿನಗಳ ಕಾಲ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯಸ್ಸಿನ ನಿರುದ್ಯೋಗಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್‌ದಾರರಿಗೆ ಮೊದಲ ಆದ್ಯತೆ ನೀಡಲಾಗುವುದು. ಶಿಬಿರದ ಅವಧಿಯಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯ ಸಂಪೂರ್ಣ ಉಚಿತವಾಗಿರಲಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲಾತಿಗಳೊಂದಿಗೆ ಡಿಸೆಂಬರ್ 4, 2026 ರಂದು (ಶುಕ್ರವಾರ) ಬೆಳಿಗ್ಗೆ 10:00 ಗಂಟೆಗೆ ಸಂಸ್ಥೆಯ ಕಚೇರಿಯಲ್ಲಿ (ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ ಅಂಚೆ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ) ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ನೇರವಾಗಿ ಹಾಜರಾಗಲು ಸಾಧ್ಯವಾಗದವರು ಡಿಸೆಂಬರ್ 4 ರೊಳಗೆ 8970476050, 9591514154, 6363139123, 9686248369 ಅಥವಾ 9886935603 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Category
ಕರಾವಳಿ ತರಂಗಿಣಿ